6 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆಗೆ ಸಿದ್ದತೆ

 

ಮುಂಬೈ,ಡಿ.15 – ದೇಶದಲ್ಲಿ ಕೊರೊನಾ ಸೋಂಕಿನ ರೂಪಾಂತರಿ ಒಮಿಕ್ರಾನ್ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮೂರು ವರ್ಷ ಮೇಲ್ಪಟ್ಟ ಮಕ್ಕಳಿಗೂ ಶೀಘ್ರದಲ್ಲೇ ಕೊರೊನಾ ಲಸಿಕೆ ನೀಡಲು ಉದ್ದೇಶಿಸಲಾಗಿದೆ.
ಮುಂದಿನ ಆರು ತಿಂಗಳ ಒಳಗಾಗಿ 3 ವರ್ಷ ಮೇಲ್ಪಟ್ಟ ಮಕ್ಕಳಿಗೆ ಲಸಿಕೆ ಸಿದ್ಧವಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಸೆರಂ ಸಂಸ್ಥೆಯ ಮುಖ್ಯಸ್ಥ ಆಧಾರ್ ಪೂನಾವಾಲ ಹೇಳಿದ್ದಾರೆ.
ದೇಶಾದ್ಯಂತ ಶಾಲೆಗಳು ಆರಂಭವಾಗಿರುವ ಹಿನ್ನೆಲೆಯಲ್ಲಿ ಮಕ್ಕಳಿಗೂ ಲಸಿಕೆ ನೀಡಬೇಕು ಎನ್ನುವ ಅಭಿಪ್ರಾಯಗಳು ಕೇಳಿಬರುತ್ತಿವೆ ಈ ನಿಟ್ಟಿನಲ್ಲಿ ಮಕ್ಕಳಿಗೆ ಲಸಿಕೆ ಉತ್ಪಾದನೆ ಕೆಲಸ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.
ಈ ಸೆರಂ ಸಂಸ್ಥೆ ಮುಂದಿನ ಆರು ತಿಂಗಳ ಒಳಗಾಗಿ ಮೂರು ವರ್ಷ ಮೇಲ್ಪಟ್ಟ ಮಕ್ಕಳಿಗೆ ಲಸಿಕೆ ಬಿಡುಗಡೆ ಮಾಡುವ ನಿರೀಕ್ಷೆ ಇದೆ ಎಂದು ಅವರು ಹೇಳಿದ್ದಾರೆ.
27ನೇ ಸಿಐಐ ಶೃಂಗಸಭೆಯಲ್ಲಿ ವಿಡಿಯೋ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಕೋವಾವಾಕ್ಸ್ ಈಗಾಗಲೇ ಪ್ರಯೋಗದ ಹಂತದಲ್ಲಿದೆಯೆಂದು ತಿಳಿಸಿದ್ದಾರೆ.
ಮೂರು ವರ್ಷ ಮೇಲ್ಪಟ್ಟ ವಯೋಮಾನದ ಎಲ್ಲ ಮಕ್ಕಳಿಗೆ ಲಸಿಕೆ ನೀಡಿಕೆ ಉದ್ದೇಶವಿದೆ. ಸದ್ಯ ಕೋವಿಶೀಲ್ಡ್ ಲಸಿಕೆಯನ್ನು ಮೂರು ವರ್ಷ ಮೇಲ್ಪಟ್ಟ ಮಕ್ಕಳಿಗೆ ಲಸಿಕೆ ನೀಡಲು ಇನ್ನೂ ಅನುಮತಿ ನೀಡಿಲ್ಲ.

ತಜ್ಞರ ಶಿಫಾರಸ್ಸು ಆಧರಿಸಿ ಕ್ರಮ
ಈ ನಡುವೆ ಪ್ರತಿಕ್ರಿಯಿಸಿರುವ ಕೇಂದ್ರ ಆರೋಗ್ಯ ಸಚಿವ ಮನ್ ಸುಖ್ ಮಾಂಡವೀಯ ಅವರು ಈ ಸಂಬಂಧ 2 ಸಮಿತಿ ನೀಡುವ ಶಿಫಾರಸು ಆಧರಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಮಕ್ಕಳಿಗೂ ಲಸಿಕೆ ನೀಡಬೇಕು ಎನ್ನುವ ಕುರಿತು ಈಗಾಗಲೇ ಪ್ರಯೋಗಗಳು ನಡೆಯುತ್ತಿವೆ ಭಾರತೀಯ ಔಷಧ ಮಹಾನಿಯಂತ್ರಕ ಸಂಸ್ಥೆ ಕೆಲವು ಲಸಿಕೆ ಗಳಿಗೆ ಅನುಮತಿ ನೀಡಿದೆ ಎಂದು ಪ್ರಯೋಗ ನಡೆಯುತ್ತಿದೆ ಎಂದು ಹೇಳಿದ್ದಾರೆ.

[t4b-ticker]

You May Also Like

More From Author

+ There are no comments

Add yours