ಇಂದಿರಾಗಾಂಧಿ ವಸತಿ ಶಾಲೆಯಲ್ಲಿ 75 ನೇ ಅಮೃತ ಮಹೋತ್ಸವದ ಧ್ವಜರೋಹಣ

 

ಚಿತ್ರದುರ್ಗ : ಚಿತ್ರದುರ್ಗ ತಾಲ್ಲೂಕಿನ ಬೋಮ್ಮೆನಹಳ್ಳಿ  ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ 75 ನೇ ಅಮೃತ ಮಹೋತ್ಸವವನ್ನು ಮೂರು ದಿನಗಳ ಕಾಲ ಬಹಳ ಆದ್ದೂರಿಯಾಗಿ ಆಚರಿಸಲಾಯಿತು.  ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಚಿತ್ರ ಕಲೆ, ಪ್ರಬಂಧ, ದೇಶಭಕ್ತಿ ಗೀತೆ ಹಾಗೂ ರಸಪ್ರಶ್ನೆ  ಕಾರ್ಯಕ್ರಮಗಳನ್ನು  ಹಮ್ಮಿಕೊಳ್ಳಲಾಗಿತ್ತು. ಹಾಗೂ ಇಂದು ನಡೆದ ಕಾರ್ಯಕ್ರಮದಲ್ಲಿ  ಧ್ವಜಾರೋಹಣ ನೇರವೇರಿಸಿದರು.

ಪ್ರಾಂಶುಪಾಲರು ವಿದ್ಯಾರ್ಥಿಗಳನ್ನು  ಕುರಿತು ಸ್ವಾತಂತ್ರ್ಯ ದಿನಾಚರಣೆಯ  ಹಲವಾರು ಮಹನೀಯರ ತ್ಯಾಗ ಬಲಿದಾನದಿಂದ ದೊರಕಿತ್ತು. ಇದಕ್ಕಾಗಿ ಹಲವಾರು ವರ್ಷಗಳ ಕಾಲ ಹೋರಾಟ ಮಾಡಿ ಸ್ವತಂತ್ರ ಪಡೆಯಲು ತಮ್ಮ ಜೀವನ ಮುಡುಪಾಗಿಟ್ಟು  ಮಹನೀಯರನ್ನು  ಸ್ಮರಿಸುತ್ತಾರೆ.

75 ನೇ ವರ್ಷದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಬಗ್ಗೆ ವಿಶೇಷ ಮಾಹಿತಿಯನ್ನ  ನೀಡುವುದರ ಮೂಲಕ ವಿದ್ಯಾರ್ಥಿಗಳಿಗೆ ಕಿವಿ ಮಾತುಗಳನ್ನು  ಹೇಳಿದರು. ಈ ಸಂದರ್ಭದಲ್ಲಿ ಸಮಾಜ ವಿಜ್ಞಾನ ಶಿಕ್ಷಕರಾದ ಸಿದ್ದಪ್ಪ ಟಿ ಇವರು ಕೂಡ ವಿದ್ಯಾರ್ಥಿಗಳನ್ನ ಕುರಿತು ಮಾತನಾಡಿದರು , ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು ಕೊನೆಯಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಈ ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲ ಭೋದಕ, ಬೋಧಕೇತರ ವರ್ಗ ನಿಲಯಪಾಲಕರು ಹಾಜರಿದ್ದರು ಕಾರ್ಯಕ್ರಮದಲ್ಲಿ ಶಿಕ್ಷಕರಾದ ರಮೇಶನಾಯ್ಕ ಸ್ವಾಗತಿಸಿ ಜಯಪ್ಪ ವಂದಿಸಿ ಪ್ರಕಾಶ ಬಿ ಇವರು ನಿರೂಪಿಸಿದರು.

[t4b-ticker]

You May Also Like

More From Author

+ There are no comments

Add yours