ಎಲ್ಲಾ ಜನಾಂಗದವರು ಭೀಮಯಾತ್ರೆಯಲ್ಲಿ ಪಾಲ್ಗೊಳ್ಳಿ: ನ್ಯಾಯವಾದಿ ಶರಣಪ್ಪ

 

 

 

 

ಚಿತ್ರದುರ್ಗ : ಸಂವಿಧಾನದ ಮೂಲಕ ಸರ್ವರಿಗೂ ಸಮಾನತೆಯನ್ನು ನೀಡಿರುವ ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ರವರ ೧೩೧ನೇ ಜಯಂತಿ ಅಂಗವಾಗಿ ಗುರುವಾರ ನಗರದಲ್ಲಿ ಅದ್ದೂರಿಯಾಗಿ ಭೀಮಯಾತ್ರೆ ನಡೆಯಲಿದ್ದು ಮಧ್ಯಾಹ್ನ ೧೨ ಗಂಟೆಗೆ ವಿವಿಧ ಜಾನಪದ ಕಲಾ ತಂಡಗಳೊಂದಿಗೆ ಮೆರವಣಿಗೆ ಸಾಗಲಿದೆ ಎಂದು ನ್ಯಾಯವಾದಿ ಶರಣಪ್ಪ ತಿಳಿಸಿದರು.
ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಂಬೇಡ್ಕರ್ ಕೇವಲ ಪರಿಶಿಷ್ಠ ಜಾತಿ, ಪರಿಶಿಷ್ಠ ವರ್ಗಕ್ಕಷ್ಟೆ ಸಂವಿಧಾನವನ್ನು ನೀಡಿಲ್ಲ. ಭಾರತದಲ್ಲಿರುವ ಎಲ್ಲಾ ಜಾತಿ ಧರ್ಮದವರಿಗೂ ಸಮಾನವಾದ ಅವಕಾಶವನ್ನು ಕಲ್ಪಿಸಿದ್ದಾರೆ. ಜಿಲ್ಲೆಯಾದ್ಯಂತ ಎಸ್.ಸಿ.ಎಸ್.ಟಿ. ಅಲ್ಪಸಂಖ್ಯಾತರು, ಸೇರಿದಂತೆ ಎಲ್ಲಾ ಜನಾಂಗದವರು ಭೀಮಯಾತ್ರೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಕರ್ನಾಟಕ ರಾಜ್ಯ ಟಿಪ್ಪು ಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ರಾಜ್ಯಾಧ್ಯಕ್ಷ ಟಿಪ್ಪು ಖಾಸಿಂ ಆಲಿ ಮಾತನಾಡುತ್ತಾ ಎಲ್ಲಾ ಮಠಗಳ ಸ್ವಾಮೀಜಿಗಳು, ಹೋರಾಟಗಾರರು, ವಿಚಾರವಂತರು, ಬುದ್ಧಿಜೀವಿಗಳು, ಚಿಂತಕರು, ಸಮಾಜಸೇವಕರು ಭೀಮಯಾತ್ರೆಯಲ್ಲಿ ಪಾಲ್ಗೊಳ್ಳಲ್ಲಿದ್ದಾರೆ. ಮುಸ್ಲಿಂ ಧರ್ಮಗುರುಗಳನ್ನು ಶೊಭಾಯಾತ್ರೆಗೆ ಆಹ್ವಾನಿಸಿದ್ದು ಇದೊಂದು ಅದ್ಭುತವಾದ ಕಾರ್ಯಕ್ರಮವಾಗಿದೆ. ಸಂವಿಧಾನದ ಮೂಲಕ ಸಮಾನತೆಯನ್ನು ನೀಡಿರುವ ಡಾ. ಬಿ.ಆರ್. ಅಂಬೇಡ್ಕರ್ ರವರ ಜಯಂತಿ ಭೀಮಯಾತ್ರೆಯಲ್ಲಿ ನಾಡಿನ ವಿವಿಧ ಭಾಗಗಳಿಂದ ಕಲಾ ತಂಡಗಳು ಪಾಲ್ಗೊಳ್ಳಲಿವೆ ಎಂದು ಹೇಳಿದರು.
ನ್ಯಾಯವಾದಿ ನರಹರಿ ಮಾತನಾಡಿ ಅಂಬೇಡ್ಕರ್ ಸೇವಾಸಮಿತಿಯಿಂದ ಡಾ.ಬಿ.ಆರ್. ಅಂಬೇಡ್ಕರ್ ರವರ ೧೩೧ನೇ ಜಯಂತಿಯನ್ನು ಗುರುವಾರ ನಗರದಲ್ಲಿ ವಿಜೃಂಭಣೆಯಿAದ ಆಚರಿಸಲಾಗುವುದು. ಎಲ್ಲಾ ಜಾತಿ, ಧರ್ಮದವರಿಗೂ ಸಂವಿಧಾನದಡಿ ಅನೇಕ ಸವಲತ್ತುಗಳನ್ನು ನೀಡಲಾಗಿದೆ. ಬುದ್ಧ, ಬಸವ, ಅಂಬೇಡ್ಕರ್ ತತ್ವದಡಿ ಸಂವಿಧಾನವನ್ನು ಉಳಿಸಿಕೊಳ್ಳುವ ಉದ್ದೇಶವಿಟ್ಟುಕೊಂಡು ಭೀಮಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ಭೂಮಿತಾಯಿ ಬಳಗದವರು ಕ್ರಾಂತಿಗೀತೆಗಳನ್ನು ಹಾಡಲಿದ್ದಾರೆ. ಅದೇ ರೀತಿ ರಸಮಂಜರಿ ಹಾಗೂ ಸಂಗೀತ ಕಾರ್ಯಕ್ರಮವನ್ನು ಅಂಬೇಡ್ಕರ್ ಪ್ರತಿಮೆ ಬಳಿ ಸಂಜೆ ಹಮ್ಮಿಕೊಳ್ಳಲಾಗಿದೆ.
ನ್ಯಾಯವಾದಿ ರವೀಂದ್ರ ಮಾತನಾಡುತ್ತ ಸರ್ವಜನಾಂಗದ ಹಿತವನ್ನು ಗಮನದಲ್ಲಿಟ್ಟುಕೊಂಡು ಸಂವಿಧಾನವನ್ನು ರಚಿಸಿದ ಡಾ. ಬಿ.ಆರ್. ಅಂಬೇಡ್ಕರ್ ರವರ ೧೩೧ನೇ ಜಯಂತಿಯ ಭೀಮಯಾತ್ರೆಯಲ್ಲಿ ಯಾವುದೇ ಜಾತಿ ಭೇದವಿಲ್ಲದೆ ಎಲ್ಲರೂ ಪಾಲ್ಗೊಂಡು ಅಂಬೇಡ್ಕರ್ ರವರ ಆಶಯಗಳನ್ನು ಗೌರವಿಸುವಂತೆ ವಿನಂತಿಸಿದರು.
ಬ್ಯಾಲಹಾಳ್ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಪ್ರಥಮ ದರ್ಜೆ ಗುತ್ತಿಗೆದಾರರ ಬ್ಯಾಲಹಾಳ್ ಜಯಪ್ಪ ಮಾತನಾಡಿ ಹೊಳಲ್ಕೆರೆ ರಸ್ತೆಯಲ್ಲಿರುವ ಕನಕ ವೃತ್ತದಿಂದ ಅಂಬೇಡ್ಕರ್ ವೃತ್ತದವರೆಗೂ ಭೀಮಯಾತ್ರೆ ಮೆರವಣಿಗೆ ಸಾಗಲಿದೆ. ಅದಕ್ಕಾಗಿ ನಗರದ ಎಲ್ಲಾ ಕಡೆ ನೀಲಿ ಬಟ್ಟೆಗಳಿಂದ ಸಿಂಗರಿಸಲಾಗಿದೆ. ಜಿಲ್ಲೆಯ ಅಲ್ಪಸಂಖ್ಯಾತರು, ಎಲ್ಲಾ ಜಾತಿ ಜನಾಂಗದವರು ಪಾಲ್ಗೊಳ್ಳುವಂತೆ ಕೋರಿದರು.

 

 

ನಗರಸಭೆ ಮಾಜಿ ಅಧ್ಯಕ್ಷ ಹೆಚ್.ಸಿ. ನಿರಂಜನಮೂರ್ತಿ, ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

[t4b-ticker]

You May Also Like

More From Author

+ There are no comments

Add yours