ಜಿಲ್ಲೆಯಲ್ಲಿ 33 ಜನರಿಗೆ ಕೋವಿಡ್ ಸೋಂಕು ದೃಢ : ಸೋಂಕಿತರ ಸಂಖ್ಯೆ 1463 ಕ್ಕೆ ಏರಿಕೆ

 

 

 

 

ಚಿತ್ರದುರ್ಗ ಆ. 15:
ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ವರದಿಯಲ್ಲಿ 42 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಶನಿವಾರ ಸೋಂಕಿತರ ಸಂಖ್ಯೆ 1463 ಕ್ಕೆ ಏರಿಕೆಯಾದಂತಾಗಿದೆ.
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಶನಿವಾರ 107 ಮಂದಿ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 10, ಹಿರಿಯೂರು-9, ಚಳ್ಳಕೆರೆ-2, ಹೊಸದುರ್ಗ-2 ಹಾಗೂ ಮೊಳಕಾಲ್ಮೂರು ತಾಲ್ಲೂಕಿನಲ್ಲಿ 10 ಸೇರಿದಂತೆ ಒಟ್ಟು 33 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಸೋಮವಾರ ಒಟ್ಟು 811 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ 33 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 1463 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 19 ಜನ ಕೋವಿಡ್‍ನಿಂದ ಮೃತಪಟ್ಟಿದ್ದರೆ ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 872 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 571 ಸಕ್ರಿಯ ಪ್ರಕರಣಗಳು ಇವೆ.
ಸದ್ಯ ಜಿಲ್ಲೆಯಲ್ಲಿ ಒಟ್ಟು 459 ಕಂಟೈನ್ಮೆಂಟ್ ವಲಯಗಳಿವೆ. ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 9293 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.

 

 

ಈವರೆಗೆ 29073 ಜನರ ಮಾದರಿ ಸಂಗ್ರಹಿಸಲಾಗಿದ್ದು, 22252 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 5055 ಜನರ ವರದಿ ಬರುವುದು ಬಾಕಿ ಇದೆ. 303 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours