ವೇಣೂರು: ಇತ್ತೀಚೆಗೆ ಅಕಾಲಿಕವಾಗಿ ನಿಧನ ಹೊಂದಿದ ನಿಟ್ಟಡೆ ಪಾಲ್ಡ್ರೋಡಿ ರಾಮಚಂದ್ರ ರಾವ್ ಅವರ ಪುತ್ರ, ವೇಣೂರು ಸಿಎ ಬ್ಯಾಂಕ್ ಮಾಜಿ ನಿರ್ದೇಶಕ ರಾಜೇಂದ್ರ ರಾವ್ ಅವರಿಗೆ ನುಡಿನಮನ ಕಾರ್ಯಕ್ರಮ ವೇಣೂರು ಲಯಕ್ಸ್ ಕ್ಲಬ್ ವಠಾರದಲ್ಲಿ ನಡೆಯಿತು.
ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಮತ್ತು ಬ್ರಹ್ಮ ಕಲಶ ಸಮಾರಂಭದಲ್ಲಿ ಹಗಲಿರುಳೆನ್ನದೆ ಕೆಲಸ ಮಾಡಿದ್ದರು. ಎಲ್ಲರೊಂದಿಗೆ ಉತ್ತಮ ಒಡನಾಟ ಹೊಂದಿದ್ದ ಇವರು ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗಿ ನಿಧನರಾದರು. ನುಡಿನಮನ ಕಾರ್ಯಕ್ರಮದಲ್ಲಿ ಗಣ್ಯರು ಮೃತರ ಗುಣಗಾನ ಮಾಡಿದರು. ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಶ್ರದ್ಧಾಂಜಲಿ ಅರ್ಪಿಸಿದರು.
ವೇಣೂರು ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಂದರ ಹೆಗ್ಡೆ BE, ಈ ವೇಳೆ ವೇಣೂರು ಗ್ರಾ.ಪಂ ಉಪಾಧ್ಯಕ್ಷ ಉಮೇಶ್ ನಡ್ತಿಕಲ್ಲು, ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ಮಾಜಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪುರುಷೋತ್ತಮ ರಾವ್, ಮೆಸ್ಕಾಂ ಸಹಾಯಕ ಇಂಜಿನಿಯರ್ ಯಜ್ಞ ನಾರಾಯಣ ಭಟ್, ಉದ್ಯಮಿ ಭಾಸ್ಕರ್ ಪಿ ಭಟ್, ಹಾಗೂ ರಾಧಾಕೃಷ್ಣ ಹೊಳ್ಳ ಹಾಗೂ ಮತ್ತಿತರ ಗಣ್ಯರು ಉಪಸ್ಥಿತರಿದ್ದು, ನುಡಿನಮನ ಸಲ್ಲಿಸಿದರು.





