ಸಮುದಾಯದ ಯುವಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ಕಾರ್ಯಕ್ರಮ: ಲ. ಅನಿಲ್ದಾಸ್
ಕುಲಶೇಖರ: ಕರ್ನಾಟಕ ರಾಜ್ಯ ಕುಲಾಲ-ಕುಂಬಾರರ ಯುವವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ (ರಿ.) ದ.ಕ. ಜಿಲ್ಲಾ ಸಮಿತಿ ಹಾಗೂ ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್ (ರಿ.) ಮಂಗಳೂರು ಸಹಯೋಗದಲ್ಲಿ 2026ರ ಜ. 4ರಂದು ಮಂಗಳೂರು ಕುದ್ಮುಲ್ ರಂಗರಾವ್ ಪುರಭವನ ವೇದಿಕೆಯಲ್ಲಿ ನಡೆಯಲಿರುವ ಕುಂಭ ಕಲಾವಳಿ ಕುಲಾಲ ಕಲಾ ಸೇವಾಂಜಲಿ ಕಾರ್ಯಕ್ರಮದ ಪೂರ್ವಭಾವಿ ಸಭೆ ನ. 30ರಂದು ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.
ಯುವವೇದಿಕೆ ಜಿಲ್ಲಾಧ್ಯಕ್ಷರಾದ ಲ. ಅನಿಲ್ದಾಸ್ ಅವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಷ್ಟೊಂದು ದೊಡ್ಡಮಟ್ಟದಲ್ಲಿ ಸಮುದಾಯದ ಸಾಂಸ್ಕೃತಿಕ ಸ್ಪರ್ಧೆ ನಡೆಯುತ್ತಿರುವುದು ಇದೇ ಮೊದಲ ಭಾರಿ ಆಗಿದೆ. ಈ ಸೇವಾಂಜಲಿ ಹಾಗೂ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ ದೊರೆಯುತ್ತಿದೆ. ಸಮುದಾಯದ ಯುವಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ಮತ್ತು ಪ್ರೋತ್ಸಾಯಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಎಲ್ಲರೂ ಸಹಕಾರ ನೀಡಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ವಿನಂತಿಸಿದರು. ಸಾಧಕರಿಗೆ ಸನ್ಮಾನ, ಆಸಕ್ತರಿಗೆ ನೆರವು ನೀಡಲಿದ್ದೇವೆ ಎಂದರು.
ವೇದಿಕೆಯಲ್ಲಿ ವಿಭಾಗೀಯ ಅಧ್ಯಕ್ಷ ಸುಕುಮಾರ್ ಬಂಟ್ವಾಳ, ರಾಜ್ಯಾಧ್ಯಕ್ಷ ಸುಧಾಕರ ಸಾಲ್ಯಾನ್, ಆರ್ಥಿಕ ಸಮಿತಿ ಸಹಸಂಚಾಲಕ ಗಂಗಾಧರ ಬಂಜನ್, ಮಹಿಳಾ ಸಮಿತಿಯ ಸುಲೋಚನಿ ಟೀಚರ್ ಕೊಲ್ಯ, ಸಹಸಂಚಾಲಕಿ ಭಾರತಿ ಸೇಸಪ್ಪ ಬಂಟ್ವಾಳ ಉಪಸ್ಥಿತರಿದ್ದರು.
ವಿವಿಧ ಸಮಿತಿಗಳ ಸಂಚಾಲಕರು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಪ್ರಧಾನ ಕಾರ್ಯದರ್ಶಿ ನವೀನ್ ಕುಮಾರ್ ಮಜಲ್ ನಿರ್ವಹಿಸಿದರು.





