ಮ೦ಗಳೂರು.ಡಿ.1,2025: ಮೂಡಬಿದ್ರೆ 110/11 ಕೆವಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಬೆಳುವಾಯಿ, ಅಳಿಯೂರು ಮತ್ತು ಶಿರ್ತಾಡಿ ಫೀಡರ್ ಗಳ ವ್ಯಾಪ್ತಿಯ ಪ್ರದೇಶಗಳಲ್ಲಿ ಡಿ.3ರ೦ದು ವಿದ್ಯುತ್ ನಿಲುಗಡೆಗೊಳ್ಳಲಿದೆ.
ಅ೦ದು ಬೆಳಗ್ಗೆ 9.30 ರಿಂದ ಸಂಜೆ 6 ಗಂಟೆಯವರೆಗೆ ಈ ಫೀಡರ್ ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ. ಹಾಗಾಗಿ ಕಾನ, ಕಲ್ಲೋಳಿ, ನಡಿಗುಡ್ಡೆ, ಕಾಂತಾವರ ಕ್ರಾಸ್, ಬೆಳುವಾಯಿ, ಬನ್ನಡ್ಕ, ಕಾಯರ್ ಕಟ್ಟೆ, ಆಜಾದ್ ನಗರ, ಕರಿಯನಂಗಡಿ, ಮಲೆಬೆಟ್ಟು, ಮಂಜನಕಟ್ಟೆ, ಕಾಯದೆ, ಕೆಸರಗದ್ದೆ, ಪೆಲಕುಂಜ, ಮೂಡಾಯಿಕಾಡು, ಬೆಳುವಾಯಿ ಚರ್ಚ್, ಇರ್ವತ್ತೂರು ಕ್ರಾಸ್, ಗುಂಡುಕಲ್ಲು, ಮೂಡುಮಾರ್ನಾಡು, ಕೆಲ್ಲಪುತ್ತಿಗೆ ದರೆಗುಡ್ಡೆ, ಅರಸುಕಟ್ಟೆ, ಪಣಪಿಲ, ಅಳಿಯೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ ಎ೦ದು ಮೆಸ್ಕಾ೦ ಪ್ರಕಟಣೆ ತಿಳಿಸಿದೆ.





