ಜೆಡಿಎಸ್ ಪಕ್ಷ 2023ರ ಚುನಾವಣೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲಿ ಜಯ:ಕೆ.ಸಿ.ವೀರೇಂದ್ರ ಪಪ್ಪಿ

 

 

 

 

ಚಳ್ಳಕೆರೆ-15ಜೆಡಿಎಸ್ ಪಕ್ಷ 2023ರ ಚುನಾವಣೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲಿ ಜಯಗಳಿಸಲಿದೆ ಎಂದು ಉದ್ಯಮಿ, ಜೆಡಿಎಸ್ ಮುಖಂಡ ಕೆ.ಸಿ.ವೀರೇಂದ್ರಪಪ್ಪಿ ಹೇಳಿದರು.
ನಗರದ ಜೆಡಿಎಸ್ ಮುಖಂಡ ಕೆ.ಸಿ. ವೀರೇಂದ್ರ ಪಪ್ಪಿ ನಿವಾಸದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ ಮಾತನಾಡಿದರು. ಈ ಭಾರಿ ಚಳ್ಳಕೆರೆ, ಚಿತ್ರದುರ್ಗ, ಹಿರಿಯೂರು ಕ್ಷೇತ್ರಗಳಲ್ಲಿ ಜೆಡಿಎಸ್ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ. ಪಕ್ಷದ ರಾಜ್ಯದ ಅಧ್ಯಕ್ಷರು, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರ ಸಮ್ಮುಖದಲ್ಲಿ ಈ ಭಾರಿ ರಾಜ್ಯದಲ್ಲಿ ಅಧಿಕಾರ ಹಿಡಿಯುತ್ತೇವೆ. ರಾಜ್ಯದಲ್ಲಿ ನೀರಾವರಿ ಯೋಜನೆಗಳನ್ನು ಜಾರಿಗೆ ತಂದಿದ್ದು ಜೆಡಿಎಸ್ ಪಕ್ಷ ಎಂದರು.
ಅಭ್ಯರ್ಥಿ ಎಂ. ರವೀಶ್ ಕುಮಾರ್ ಮಾತನಾಡಿ, ನನ್ನ ಬಿಜೆಪಿಗೆ ಕರೆದರು, ಆದರೆ ಇದಕ್ಕೆ ನಾವು ಒಪ್ಪಿಲ್ಲ, ನಾವು ಜೆಡಿಎಸ್ ಬಿಟ್ಟು ಎಲ್ಲಿ ಹೋಗಲ್ಲ, ನಮ್ಮನ್ನು ಮಾಜಿ ಪ್ರಧಾನಿ ದೇವೆಗೌಡ, ಮಾಜಿ ಸಿಎಂ ಕುಮಾರ ಸ್ವಾಮಿ ಮಕ್ಕಳಂತೆ ನೋಡುತ್ತಾರೆ. ನಾವು ಅವರಿಗೆ ಮೋಸ ಮಾಡಲ್ಲ ಎಂದು ಸ್ವಷ್ಟನೆ ನೀಡಿದರು.
ತುರುವನೂರು ಹೋಬಳಿಯಲ್ಲಿ ಲಿಂಗಾಯಿತ ಸಮುದಾಯದ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು ಜೆಡಿಎಸ್ ಸೇರ್ಪಡೆ ಮುಂದಾಗಿದ್ದಾರೆ. ಮುಂದಿನ ದಿನಗಳಲ್ಲಿ ಮುಖಂಡ ಕೆ.ಸಿ.ವಿರೇಂದ್ರ ಪಪ್ಪಿ, ಅಭ್ಯರ್ಥಿ ರವೀಶ್ ಕುಮಾರ್ ನೇತೃತ್ವದಲ್ಲಿ ಸೇರ್ಪಡೆ ಮಾಡಿಕೊಳ್ಳುತ್ತೇವೆ ಎಂದು ಹೇಳಿದರು.
ಚಿತ್ರದುರ್ಗ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷದ ಸಾಕಷ್ಟು ಕಾರ್ಯಕರ್ತರು ಇದ್ದಾರೆ. ಪಕ್ಷ ಮತ್ತು ಕಾರ್ಯಕರ್ತರ ಬಲವರ್ಧನೆಗೆ ಈ ಭಾಗದಲ್ಲಿ ವಿಧಾನ ಪರಿಷತ್ ಹಾಗು ರಾಜ್ಯ ಸಭೆ ಗೆ ಈ ಭಾಗದ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು ಎಂದು ಜೆಡಿಎಸ್ ವರಿಷ್ಠರಿಗೆ ಒತ್ತಾಯ ಮಾಡಲಾಗಿದೆ ಎಂದರು.
ತಾಲ್ಲೂಕು ಅಧ್ಯಕ್ಷ ಪಿ.ತಿಪ್ಪೇಸ್ವಾಮಿ ಮಾತನಾಡಿ, ಜಿಲ್ಲೆಯಲ್ಲಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಉತ್ತಮವಾದ ಫಲಿತಾಂಶ ಬರಲಿದೆ. ಜೆಡಿಎಸ್ ಜಿಲ್ಲೆಯಲ್ಲಿ ಸುಮಾರು 5 ಕ್ಷೇತ್ರಗಳಲ್ಲಿ ಖಾತೆ ತೆರೆಯಲಿದೆ. ಮಾಜಿ ಸಿಎಂ ಕುಮಾರ್ ಸ್ವಾಮಿ ಅವರು ಜಿಲ್ಲೆಯಲ್ಲಿ 800 ಕೋಟೆ ಸಾಲಮನ್ನಾ ಮಾಡಿದ್ದಾರೆ, ಈ ಸಾಲ ಮನ್ನಾ ಜಿಲ್ಲೆಯಲ್ಲಿ ನಮ್ಮ ಪಕ್ಷದ ಗೆಲುವಿಗೆ ಶ್ರೀರಕ್ಷೆಯಾಗಲಿದೆ ಎಂದರು.
ಸಭೆಯಲ್ಲಿ ಮುಖಂಡ ಶಶಿಧರ್, ನಗರಸಭೆ ಸದಸ್ಯ ಪ್ರಮೋದ್ , ಶ್ರೀನಿವಾಸ್ ಇದ್ದರು

 

 

[t4b-ticker]

You May Also Like

More From Author

+ There are no comments

Add yours