ಮಕ್ಕಳು ಹಬ್ಬದ ವಾತವರಣದಲ್ಲಿ ಮನಸ್ಸು ಉಲ್ಲಾಸಿತರಾಗಿ ಶಾಲೆಗೆ ಬರಬೇಕು: ಸಚಿವ ನಾಗೇಶ್

 

 

 

 

ಶಾಲೆಯ ಹಬ್ಬದ ವಾತಾವರಣ:  ಶಾಲೆಗಳಿಗೆ ಮಕ್ಕಳು ಬರಬೇಕಾದ ಸಂದರ್ಭದಲ್ಲಿ ಹಬ್ಬದ ಕಳೆ ಮೂಡಬೇಕು. ಮಕ್ಕಳ ಮನಸ್ಸು ಉಲ್ಲಾಸಿತರಾಗಿ ಬರಬೇಕು ಎಂಬುದು ಶಿಕ್ಷಣ ಸಚಿವ ಬಿ. ಸಿ. ನಾಗೇಶ್‌ರ ಕನಸು.

 

 

ಇನ್ನು ಕಲಿಕಾ ಚೇತರಿಕೆ ಕಾರ್ಯಕ್ರಮವನ್ನು ಅನುಷ್ಟಾನ ಮಾಡುವ ಜವಾಬ್ದಾರಿಯನ್ನು ಡಿಡಿಪಿಐ ಮತ್ತು ಬಿಇಒಗಳಿಗೆ ನೀಡಲಾಗಿದೆ. ಈ ಶೈಕ್ಷಣಿಕ ವರ್ಷ ಮೇ 16 ರಿಂದ ಪ್ರಾರಂಭವಾಗಲಿದ್ದು ವಿದ್ಯಾರ್ಥಿಗಳ ಕಲಿಕಾ ನ್ಯೂನ್ಯತೆಯನ್ನು ಸರಿದೂಗಿಸುವ ಸಲುವಾಗಿ ಹಮ್ಮಿಕೊಂಡಿರುವ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಯೋಜನೆಯನ್ನು ಹಾಕಿಕೊಳ್ಳಲಾಗದೆ.

ಶಾಲಾ ಹಂತದಲ್ಲಿ ನಡೆಯಲಿರುವ ಕಲಿಕಾ ಚೇತರಿಕೆಯ ಮಾಹಿತಿಯನ್ನು ಸಿಆರ್ ಪಿಗಳ ಮೂಲಕ ತರಿಸಿಕೊಂಡು ಡಿಡಿಪಿಐ ಮತ್ತು ಬಿಇಒಗಳು ಪರಿಶೀಲಿಸಲಿದ್ದಾರೆ. ಎರಡು ಶೈಕ್ಷಣಿಕ ವರ್ಷ ವಿದ್ಯಾರ್ಥಿಗಳ ಕೌಶಲ್ಯವನ್ನೇ ಕಸಿದುಕೊಂಡಿದೆ. ಇದರಿಂದಾಗಿ ಕಲಿಕಾ ಚೇತರಿಕೆಯ ಕಾರ್ಯಕ್ರಮದ ಮಹತ್ವವನ್ನು ಪೋಷಕರಿಗೆ ಮನವರಿಕೆ ಮಾಡಿಕೊಡುವ ಮೂಲಕ ವಿದ್ಯಾರ್ಥಿಗಳನ್ನು ಶಾಲೆಯ ಕೊಠಡಿಗಳಿಗೆ ಬರುವಂತೆ ಮಾಡುವುದು ಹಾಗೂ ಮಕ್ಕಳ ಕಲಿಕೆಯ ನ್ಯೂನ್ಯತೆಯನ್ನು ಪತ್ತೆ ಮಾಡಿ ಉತ್ತಮ ಶಿಕ್ಷಣವನ್ನು ನೀಡಬೇಕಾಗಿದೆ.

[t4b-ticker]

You May Also Like

More From Author

+ There are no comments

Add yours