ಬಿಜೆಪಿ ಸರ್ಕಾರ ನಾಗಮೋದನ್ ದಾಸ್ ವರದಿ ಜಾರಿಗೊಳಿಸದಿದ್ದರೆ ಉಗ್ರ ಹೋರಟ: ಶಾಸಕ ಟಿ.ರಘುಮೂರ್ತಿ ಎಚ್ಚರಿಕೆ

 

 

 

 

ಚಳ್ಳಕೆರೆ-20 ತಾಲ್ಲೂಕಿನ‌ ನೂರಾರು ಪರಿಶಿಷ್ಟ ಜಾತಿ, ಪಂಗಡ‌‌ ಮುಖಂಡರು 7.5ಮೀಸಲಾತಿಗಾಗಿ ನಗರದ ಪ್ರಮುಖ‌ ಬೀದಿಗಳಲ್ಲಿ‌ ಪ್ರತಿಭಟನೆ ನಡೆಸಿದರು.
ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಟಿ.ರಘುಮೂರ್ತಿ ನೇತೃತ್ವದಲ್ಲಿ “ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳ ಹಾಗೂ ನಾಗಮೋಹನ್ ದಾಸ್ ವರದಿಯನ್ನು ಅನುಷ್ಠಾನಗೊಳಿಸಬೇಕೆಂದು ಒತ್ತಾಯಿಸಿ ಬೃಹತ್ ಪ್ರತಿಭಟನೆ ಹಾಗೂ ಸ್ವಯಂ ಪ್ರೇರಿತ ಬಂದ್ ಗೆ‌ ನಗರದ ಜನರು‌ ಸ್ಪಂದಿಸಿದರು.
ಮೀಸಲಾತಿ ಹೆಚ್ಚಳ ಹಾಗೂ ನಾಗಮೋಹನ್ ದಾಸ್ ವರದಿಯನ್ನು ಅನುಷ್ಠಾನಗೊಳಿಸಬೇಕೆಂದು ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಅವರು ನಡೆಸುತ್ತಿರುವ ಧರಣಿ ಸತ್ಯಾಗ್ರಹ 100ನೇ ದಿನಕ್ಕೆ ಕಾಲಿಟ್ಟಿದೆ. ಈ ಹಿನ್ನೆಲೆಯಲ್ಲಿ ಇಂದು ರಾಜ್ಯಾದ್ಯಂತ ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಚಳ್ಳಕೆರೆಯಲ್ಲಿ ಕರ್ನಾಟಕ ರಾಜ್ಯ ಸ್ವಾಭಿಮಾನಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿ ವತಿಯಿಂದ
ಪ್ರತಿಭಟನೆಗೆ ಹೆಚ್ಚಿನ‌ ಮೆರಗು‌ ನೀಡಲಾಯಿತು.
ಡಾ.ಬಾಬು ಜಗಜೀವನ್ ರಾಂ ಪ್ರತಿಮೆ ಮುಂಭಾಗದಿಂದ ಹೊರಟ ಪ್ರತಿಭಟನಾ ಮೆರವಣಿಗೆ ತಾಲೂಕು ಕಚೇರಿಯಲ್ಲಿ ಮುಕ್ತಾಯಗೊಂಡಿತು. ಬಳಿಕ ಪ್ರತಿಭಟನೆ ನಡೆಸಿ ಮೀಸಲಾತಿ ಹೆಚ್ಚಿಸಬೇಕೆಂದು ಒತ್ತಾಯಿಸಿ ತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ಶಾಸಕ ಟಿ.ರಘುಮೂರ್ತಿ ಮಾತನಾಡಿ, ಬಿಜೆಪಿ ಸರ್ಕಾರ ನಾಗಮೋದನ್ ದಾಸ್ ವರದಿಯನ್ನು ಅನುಷ್ಠಾನಗೊಳಿಸದೆ, ಮೀಸಲಾತಿ ಹೆಚ್ಚಳ ವಿಚಾರದಲ್ಲಿ ವಿಳಂಬ ಧೋರಣೆ ಅನುಸರಿಸುವ ಮೂಲಕ ಶೋಷಿತ ವರ್ಗದವರಿಗೆ ಅನ್ಯಾಯ‌‌ ಮಾಡುತ್ತಿದೆ. ಶೋಷಿತ ವರ್ಗದವರನ್ನು ಗಮನದಲ್ಲಿಟ್ಟುಕೊಂಡು ಈ ಕೂಡಲೇ ಮೀಸಲಾತಿ ಹೆಚ್ಚಿಸುವುದರ ಜೊತೆಗೆ ನಾಗಮೋದನ್ ದಾಸ್ ವರದಿಯನ್ನು ಅನುಷ್ಠಾನಗೊಳಿಸಬೇಕೆಂದು ಆಗ್ರಹಿಸಿದರು.‌

 

 

ಮೀಸಲಾತಿ ಹೆಚ್ಚಿಸಬೇಕೆಂದು, ನಾಗಮೋಹನ್ ದಾಸ್ ವರದಿ ಅನುಷ್ಠಾನಕ್ಕೆ ಆಗ್ರಹಿಸಿ ಸಾಕಷ್ಟು ಹೋರಾಟಗಳನ್ನು ಮಾಡಿಕೊಂಡು ಬರಲಾಗಿದ್ದು, ಸರ್ಕಾರ ಭರವಸೆಗಳನ್ನು ನೀಡುತ್ತಿದೆಯೇ ಹೊರತು ಈ ಬಗ್ಗೆ ಕ್ರಮಕೈಗೊಂಡಿಲ್ಲ. ಸರ್ಕಾರ ಕೂಡಲೇ ಮೀಸಲಾತಿ ಹೆಚ್ಚಳಕ್ಕೆ ಕ್ರಮವಹಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

ವಿವಿಧ ಜನಪರ ಸಂಘಟನೆಗಳು, ಸಂಸ್ಥೆಗಳು, ರೈತ ಮುಖಂಡರು, ಕಾರ್ಯಕರ್ತರು ಸೇರಿದಂತೆ ಸಾವಿರಾರು ಮಂದಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು‌.

[t4b-ticker]

You May Also Like

More From Author

+ There are no comments

Add yours