ಚಿತ್ರದುರ್ಗ (ಕರ್ನಾಟಕ ವಾರ್ತೆ) ಮೇ21: 2022-23ನೇ ಸಾಲಿನ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಥಮ ಸೆಮಿಸ್ಟರ್ ಡಿಪ್ಲೊಮಾ ಪ್ರವೇಶಕ್ಕೆ ಸಂಸ್ಥೆಯ ಹಂತದಲ್ಲಿ ನಾನ್ ಇಂಟರ್ ಆಕ್ಟಿವ್ ಕೌನ್ಸಿಲಿಂಗ್ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮೇ 26ರಂದು ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಇದನ್ನು ಓದಿ:ವಿಧಾನ ಪರಿಷತ್ ಜೆಡಿಎಸ್ ಅಭ್ಯರ್ಥಿಯಾಗಿ ಕೆ.ಸಿ.ವೀರೇಂದ್ರ(ಪಪ್ಪಿ) ಆಯ್ಕೆ ಸಾಧ್ಯತೆ ಹೆಚ್ಚು?
ಅಭ್ಯರ್ಥಿಗಳು ಎಸ್ಎಸ್ಎಲ್ಸಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಶೇ.35 ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು. ಅಭ್ಯರ್ಥಿಗಳ ಅಂತಿಮ ಮೆರಿಟ್ ಪಟ್ಟಿ ಪ್ರಕಟಣೆಯನ್ನು ಮೇ 28 ಸಂಜೆ 5 ಗಂಟೆಯ ಬಳಿಕ ಬಿಡುಗಡೆ ಮಾಡಲಾಗುವುದು. ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗಾಗಿ ತಿತಿತಿ.ಜಣeಞ.ಞಚಿಡಿಟಿಚಿಣಚಿಞಚಿ.
+ There are no comments
Add yours