ನವದೆಹಲಿ, ಡಿಸೆಂಬರ್ 02: ಪೋಕ್ಸೋ ಕೇಸ್ ವಿಚಾರದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಸುಪ್ರೀಂಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೈಸಿಂಗ್ ಜೊಯ್ಮಾಲ್ಯ ಅವರನ್ನೊಳಗೊಂಡ ಪೀಠ ಪ್ರಕರಣದ ವಿಚಾರಣೆಗೆ ಮಧ್ಯಂತರ ತಡೆ ನೀಡಿದೆ. ಸಿಐಡಿ ಮತ್ತು ಸಂತ್ರಸ್ತ ಬಾಲಕಿಗೆ ನೋಟಿಸ್ ಜಾರಿ ಮಾಡಿದೆ.





