ನಾಳೆ ಜಿ.ಪಂ ಉಪಾಧ್ಯಕ್ಷರ ಚುನಾಚಣೆ: ಚುನಾವಣಾ ಕೇಂದ್ರ ವ್ಯಾಪ್ತಿಯ 200 ಮೀಟರ್ ಸುತ್ತ ನಿಷೇಧಾಜ್ಞೆ: ಜಿಲ್ಲಾಧಿಕಾರಿ

 

 

 

 

ಚಿತ್ರದುರ್ಗ, ಆ.18: ಚಿತ್ರದುರ್ಗ ಜಿಲ್ಲಾ ಪಂಚಾಯಿತಿಯಲ್ಲಿ ರಾಜೀನಾಮೆಯಿಂದ ತೆರವಾಗಿರುವ ಉಪಾಧ್ಯಕ್ಷರ ಸ್ಥಾನಕ್ಕೆ ಆಗಸ್ಟ್ 19 ರಂದು ಚುನಾವಣೆ ನಡೆಯಲಿರುವುದರಿಂದ ಚುನಾವಣಾ ಕೇಂದ್ರದ 200 ಮೀ ವ್ಯಾಪ್ತಿಯಲ್ಲಿ ಸಿ.ಆರ್.ಪಿ.ಸಿ 1973 ಕಲಂ 144ರ ಮೇರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಆದೇಶಿಸಿದ್ದಾರೆ. ಚಿತ್ರದುರ್ಗ  ಜಿಲ್ಲಾಳ ಪಂಚಾಯಿತಿಯಲ್ಲಿ  ರಾಜೀನಾಮೆಯ ಕಾರಣದಿಂದ ತೆರವಾಗಿರುವ ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆಯು ನಡೆಯಬೇಕಿದ್ದು, ಪ್ರಸ್ತುತ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಭೀತಿ ಇರುವುದರಿಂದ ಚುನಾವಣೆಯನ್ನು ಆಗಸ್ಟ್ 19 ರಂದು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆಸಲು ಪ್ರಾದೇಶಿಕ ಆಯುಕ್ತರು, ಬೆಂಗಳೂರು ಇವರು ಸಾಮಾಜಿಕ ಅಂತರ ಹಾಗೂ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಕನಿಷ್ಟ 6 ಅಡಿ ಸಾಮಾಜಿಕ ಅಂತರ ಕಾಪಾಡಿಕೊಂಡು ಚುನಾವಣೆ ನಡೆಸುವಂತೆ ತಿಳಿಸಿರುತ್ತಾರೆ. ಜಿಲ್ಲಾ ಪಂಚಾಯತ್, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸುವುದರಿಂದ, ಉಪಾಧ್ಯಕ್ಷರ ಸ್ಥಾನಕ್ಕೆ ನಾಮಪತ್ರ ಸಲ್ಲಿಸುವ ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರು ಹಾಗೂ ಸದಸ್ಯರುಗಳು,  ಹೆಚ್ಚಿನ ಸಂಖ್ಯೆಯಲ್ಲಿ ಸೇರಲಿದ್ದು, ಕೊರೊನಾ ವೈರಸ್ ಸೋಂಕು ಹರಡುವ ಭೀತಿ ಇರುವುದರಿಂದ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಅಂದರೆ ಕನಿಷ್ಟ 6 ಅಡಿ ಅಂತರ ಕಾಪಾಡಿಕೊಂಡು ಚುನಾವಣೆ ನಡೆಸಬೇಕಾಗಿದ್ದು ಹಾಗೂ ಮತದಾನದ ಪಾವಿತ್ರತೆಯನ್ನು ಕಾಪಾಡುವ ಹಿತದೃಷ್ಠಿಯಿಂದ ಸಿ.ಆರ್.ಪಿ.ಸಿ. 1973ರ ಕಲಂ 144 ಮೇರೆಗೆ ಪ್ರತಿಬಂಧಕಾಜ್ಞೆ ವಿಧಿಸಲಾಗಿದೆ. ಆಗಸ್ಟ್ 19 ರಂದು ಬೆಳಿಗ್ಗೆ 6.00 ಗಂಟೆಯಿಂದ ಸಂಜೆ 5.00 ಗಂಟೆಯವರೆಗೆ ಚಿತ್ರದುರ್ಗ ಜಿಲ್ಲಾ ಪಂಚಾಯತ್ ಇಲ್ಲಿ ಚುನಾವಣೆ ನಡೆಯಲಿರುವುದರಿಂದ ಚುನಾವಣಾ ಕೇಂದ್ರದ ವ್ಯಾಪ್ತಿಯ 200 ಮೀಟರ್ ಸುತ್ತ ಸಿ.ಆರ್.ಪಿ.ಸಿ ಕಲಂ 144 ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅದೇಶಿಸಿದ್ದಾರೆ.

 

 

[t4b-ticker]

You May Also Like

More From Author

+ There are no comments

Add yours