ಇಂದಿನಿಂದ ಐದು ದಿನಗಳ ಕಾಲ ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ.

 

 

 

 

ಬೆಂಗಳೂರು:ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ತುಮಕೂರು, ಮೈಸೂರು, ಮಂಡ್ಯ, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳ ಹಲವೆಡೆ ಅಧಿಕ ಮಳೆ ನಿರೀಕ್ಷಿಸಲಾಗಿದೆ. ಈ ಎಲ್ಲ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಎಚ್ಚರಿಕೆ ಕೊಡಲಾಗಿದೆ. ಕೊಡಗು, ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗದಲ್ಲಿ ಜೂ.19ರಂದು ಭಾರಿ ಮಳೆ ಕಾರಣಕ್ಕೆ ಅಂದು ಮಾತ್ರ “ಆರೆಂಜ್ ಅಲರ್ಟ್’ ಘೋಷಿಸಲಾಗಿದೆ.

 

 

ಇದೇ ಐದು ದಿನದ ಅವಧಿಯಲ್ಲಿ ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಹಲವು ಪ್ರದೇಶಗಳಲ್ಲಿ ಸಾಮಾನ್ಯದಿಂದ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕಚೇರಿ ಅಧಿಕಾರಿಗಳು ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours