ಜೂ.22 ರಂದು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

 

 

 

 

ಚಿತ್ರದುರ್ಗ: ಕಾಂಗ್ರೆಸ್ ಪಕ್ಷದ ಗೌರವಾನ್ವಿತ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ರವರ ವಿರುದ್ಧ ಕೃತಕವಾಗಿ ಸೃಷ್ಟಿಸಿದ ವಿಷಯದಲ್ಲಿ ತನಿಖೆಯನ್ನು ಕೈಗೆತ್ತಿಕೊಂಡು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಇ.ಡಿ ಯನ್ನು ದುರ್ಬಳಕೆ ಮಾಡಿಕೊಂಡು ಕಿರುಕುಳ ನೀಡುತ್ತಿರುವುದನ್ನು ಖಂಡಿಸಿ ಹೊಳಲ್ಕೆರೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೆಪಿಸಿಸಿ ಉಪಾಧ್ಯಕ್ಷ,ಮಾಜಿ ಸಚಿವ ಹೆಚ್.ಆಂಜನೇಯ ರವರ ನೇತೃತ್ವದಲ್ಲಿ ದಿನಾಂಕ 22.6.2022ರ ಬುಧವಾರ 11 ಗಂಟೆಗೆ ಹೊಳಲ್ಕೆರೆ ಬ್ಲಾಕ್ ಕಾಂಗ್ರೆಸ್ ಕಚೇರಿಯಿಂದ ತಾಲೂಕ ಕಚೇರಿ ವರೆಗೆ ಪಾದಯಾತ್ರೆಯ ಪ್ರತಿಭಟಿಸಿ ತಹಶೀಲ್ದಾರ್ ಮುಖಾಂತರ ಗೌರವಾನ್ವಿತ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಗುವುದು.

 

 

ಈ ಪ್ರತಿಭಟನೆಯಲ್ಲಿ ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಮಾಜಿ ಶಾಸಕ ಎ.ವಿ.ಉಮಾಪತಿ, ಡಿಸಿಸಿ ಚಿತ್ರದುರ್ಗ ಜಿಲ್ಲಾಧ್ಯಕ್ಷ ತಾಜ್ ಪೀರ್, ಕಾರ್ಯಧ್ಯಕ್ಷ ಕೆ.ಎಂ.ಹಾಲಸ್ವಾಮಿ ಸೇರಿದಂತೆ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಪಕ್ಷದ ಎಲ್ಲ ವಿವಿಧ ಘಟಕಗಳ ಮುಂಚೂಣಿ ಅಧ್ಯಕ್ಷರು, ಉಪಾಧ್ಯಕ್ಷರುಗಳು, ಪದಾಧಿಕಾರಿಗಳೂ, ಎಲ್ಲ ಚುನಾಯಿತ ಮಾಜಿ ಮತ್ತು ಹಾಲಿ ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿ ಯಶಸ್ವಿ ಮಾಡಬೇಕೆಂದು ಹೊಳಲ್ಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಟಿ.ಹನುಮಂತಪ್ಪ
ಮನವಿ ಮಾಡಿದ್ದಾರೆ.

[t4b-ticker]

You May Also Like

More From Author

+ There are no comments

Add yours