ಜೂನ್ 27 ರಿಂದ ಜುಲೈ 04 ರವರೆಗೆ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆ ಸೂಕ್ತ ಮುಂಜಾಗ್ರತಾ ಕ್ರಮಕ್ಕೆ ಸೂಚನೆ:ಡಿಸಿ ಕವಿತಾ ಎಸ್.ಮನ್ನಿಕೇರಿ

 

 

 

 

ಚಿತ್ರದುರ್ಗ (ಕರ್ನಾಟಕ ವಾರ್ತೆ)
ಜೂನ್ 27 ರಿಂದ ಜುಲೈ 04 ರವರೆಗೆ ಎಸ್.ಎಲ್.ಎಲ್.ಸಿ ಪೂರಕ ಪರೀಕ್ಷೆಗಳು ಜರುಗಲಿವೆ. ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಸುಗಮವಾಗಿ ಪರೀಕ್ಷೆಗಳನ್ನು ನಡೆಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಕುರಿತು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೋವಿಡ್ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚಾಗುತ್ತಿವೆ. ಪ್ರತಿಯೊಬ್ಬ ವಿದ್ಯಾರ್ಥಿಯನ್ನು ಕೂಲಂಕುಷವಾಗಿ ತಪಾಸಣೆ ನಡೆಸಬೇಕು. ಥರ್ಮಲ್ ಸ್ಕ್ಯಾನಿಂಗ್ ಕಡ್ಡಾಯಗೊಳಿಸಿ. ಪರೀಕ್ಷೆ ನಡೆಯುವ ಕೊಠಡಿಗಳನ್ನು ಸ್ಯಾನಿಟೈಜರ್ ಬಳಿಸಿ ಶುಚಿಗೊಳಿಸಬೇಕು. ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಅಗತ್ಯ ವೈದ್ಯಕೀಯ ಸಿಬ್ಬಂದಿಯನ್ನು ನೇಮಿಸಬೇಕು. ರಜೆಯ ನಂತರ ಶಾಲೆಗಳು ಪುನರಾರಂಭಗೊಂಡಿವೆ. ಶಾಲೆಯ ಕುಡಿಯುವ ನೀರಿನ ಟ್ಯಾಂಕ್ ಸ್ವಚ್ಛಗೊಳಿಸಿ. ಶುದ್ಧ ಕುಡಿಯುವ ನೀರು ಮಕ್ಕಳಿಗೆ ದೊರಕಬೇಕು. ಪರೀಕ್ಷಾ ಅಕ್ರಮಗಳಿಗೆ ಎಡೆ ಮಾಡಿಕೊಡಬೇಡಿ ಎಂದರು. ಪೊಲೀಸ್ ಇಲಾಖೆಯಿಂದ ಪರೀಕ್ಷಾ ಕಾರ್ಯಗಳಿಗೆ ಸೂಕ್ತ ಬಂದೋಬಸ್ತ್ ಕಲ್ಪಿಸಲು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
6 ಪರೀಕ್ಷಾ ಕೇಂದ್ರ 805 ವಿದ್ಯಾರ್ಥಿಗಳು : ಚಿತ್ರದುರ್ಗ ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು, ಕೆಳಗೋಟೆಯ ಡಾನ್ ಬಾಸ್ಕೋ ಪ್ರೌಢಶಾಲೆ, ಚಳ್ಳಕೆರೆ ಹಾಗೂ ಮೊಳಕಾಲ್ಮೂರು ತಾಲೂಕಿನ ವಿದ್ಯಾರ್ಥಿಗಳಿಗೆ ಚಳ್ಳಕೆರೆ ನಗರದ ಹೆಚ್.ಟಿ.ಟಿ. ಸರ್ಕಾರಿ ಪ್ರೌಢಶಾಲೆ, ಹಿರಿಯೂರು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು, ಹೊಳಲ್ಕೆರೆಯ ಟಿ.ಪಿ.ಸಿ.ಕೆ ಬಾಲಿಕಾ ಪ್ರೌಢಶಾಲೆ, ಹೊಸದುರ್ಗದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪೂರಕ ಪರೀಕ್ಷೆಗಳು ಜರುಗಲಿವೆ.  ಒಟ್ಟು 805 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಪರೀಕ್ಷೆ ವೇಳಾಪಟ್ಟಿ : ಜೂನ್ 27 ಸೋಮವಾರ ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ ಸಂಗೀತ/ ಹಿಂದೂಸ್ತಾನಿ ಸಂಗೀತ, ಜೂನ್ 28 ಮಂಗಳವಾರ ಕನ್ನಡ ಸೇರಿದಂತೆ ಪ್ರಥಮ ಭಾಷೆ ಪತ್ರಿಕೆ, ಜೂನ್ 29 ಬುಧವಾರ ದ್ವೀತಿಯ ಭಾಷೆ ಇಂಗ್ಲೀಷ್ ಹಾಗೂ ಕನ್ನಡ, ಜೂನ್ 30 ಗುರುವಾರ ಸಮಾಜ ವಿಜ್ಞಾನ, ಜುಲೈ 01 ರಂದು ಹಿಂದಿ ಭಾಷೆ ಸೇರಿದಂತೆ ತೃತೀಯ ಭಾಷೆಗಳು, ಎನ್.ಎಸ್.ಕ್ಯೂ.ಎಫ್. ಪರೀಕ್ಷಾ ವಿಷಯಗಳಾದ ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್, ಜುಲೈ 02 ರಂದು ಎಲಿಮೆಂಟ್ಸ್ ಆಪ್ ಮೆಕಾನಿಕಲ್ ಮತ್ತು ಎಲೆಕ್ಟ್ರಿಕಲ್ ಇಂಜಿನಿಯರಿಂಗ್, ಇಂಜಿನಿಯರಿಂಗ್ ಗ್ರಾಫಿಕ್ಸ್, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ ಹಾಗೂ ಜುಲೈ 4 ರಂದು ಕೋರ್ ಸಬ್ಜಕ್ಟ್‍ಗಳಾದ ಗಣಿತ ಮತ್ತು ಸಮಾಜ ಶಾಸ್ತ್ರ ಪರೀಕ್ಷೆ ಜರುಗಲಿವೆ.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಡಾ.ರಂಗಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಂಗನಾಥ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ರವಿಶಂಕರ್ ರೆಡ್ಡಿ ಸೇರಿದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

 

 

[t4b-ticker]

You May Also Like

More From Author

+ There are no comments

Add yours