ಯೋಗದಿಂದ ಸಮಾಜಕ್ಕೆ, ವಿಶ್ವಕ್ಕೆ ಒಳಿತಾಗಲಿದೆ: ಪ್ರಧಾನಿ ನರೇಂದ್ರ ಮೋದಿ

 

 

 

 

ಮೈಸೂರು, ಜೂ. 21: ಇಂದು ಅಂತ ರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಮೈಸೂರಿನ ಅರಮನೆ ಆವರಣ ಇಂದು  ಬೆಳಗ್ಗೆ   ಐತಿಹಾಸಿಕ ಯೋಗಾಭ್ಯಾಸಕ್ಕೆ ಸಾಕ್ಷಿಯಾಯಿತು. ಪ್ರಧಾನಿ ನರೇಂದ್ರ ಮೋದಿ ಅವರು, ಸ್ವತಃ ಯೋಗಾಭ್ಯಾಸ ಮಾಡಿ ಇಡೀ ವಿಶ್ವವೇ ಸಾಂಸ್ಕೃತಿಕ ನಗರಿ ಮೈಸೂರಿನತ್ತ ತಿರುಗಿ ನೋಡುವಂತೆ ಯೋಗಭ್ಯಾಸ ನಡೆಯಿತು.

ಇಂದು ಬೆಳಗಿನಜಾವ 4  ಗಂಟೆಯಿಂದಲೇ ಯೋಗಾಭ್ಯಾಸಿಗಳು ನಗರದ ಎಲ್ಲ ಮೂಲೆಗಳಿಂದಲೂ ಅರಮನೆಯತ್ತ ನಡೆದು ಬಂದರು. ಬಿಳಿ ಬಣ್ಣದ ಉಡುಗೆ ತೊಟ್ಟು, ಶಾಲನ್ನು ಕುತ್ತಿಗೆಯಲ್ಲಿ ಇಳಿ ಬಿಟ್ಟು ಯೋಗ ಕಾರ್ಯಕ್ರಮದಲ್ಲಿ ನಮ್ಮ ನೆಚ್ಚಿನ  ಪ್ರಧಾನಿ ಮೋದಿ ಪಾಲ್ಗೊಂಡಿದ್ದರು. ಹಕ್ಕಿ ಚಿಲಿಪಿಲಿ, ತಂಗಾಳಿ, ಚಳಿಯ ವಾತಾವರಣದ ನಡುವೆ ಅರಮನೆ ಮುಂಭಾಗದ ವಿಶಾಲ ಆವರಣದಲ್ಲಿ ಯೋಗಾಭ್ಯಾಸಿಗಳು ಸೂರ್ಯಾಭಿಮುಖವಾಗಿ ಕುಳಿತು ಕಾಯುತ್ತಿರುವಾಗ ಬೆಳಿಗ್ಗೆ 6.35  ಕ್ಕೆ ಪ್ರಧಾನಿ ಮೋದಿ ವೇದಿಕೆಗೆ ಆಗಮಿಸಿದರು. ಪ್ರಧಾನಿ ವೇದಿಕೆಗೆ ಬರುತ್ತಿದ್ದಂತೆ ಬಾಲಕ-ಬಾಲಕಿಯರು, ಯುವಜನ, ಮಧ್ಯ ವಯಸ್ಕರು, ವೃದ್ಧರು ಸೇರಿದಂತೆ ವಿವಿಧ ವಯೋಮಾನದವರ ಉತ್ಸಾಹ ಇಮ್ಮಡಿಗೊಂಡಿದ್ದು  ಕಂಡಿತು.

ಸುಮಾರು 15 ,000  ಜನರೊಂದಿಗೆ ಪ್ರಧಾನಿ ಯೋಗ ಮಾಡಿದರು. ಯೋಗಭ್ಯಾಸದ ಮೊದಲು  ಮಾತನಾಡಿದ ಅವರು ‘ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ದೇಶದ 75  ಚಾರಿತ್ರಿಕ ಸ್ಥಳಗಳಲ್ಲಿ ಸಾಮೂಹಿಕ ಯೋಗಾಭ್ಯಾಸ ನಡೆಸಲಾಗುತ್ತಿದೆ. ಇತಿಹಾಸದಲ್ಲಿ ವಿಶೇಷ ಸ್ಥಾನವುಳ್ಳ ಮೈಸೂರು ಅರಮನೆ ಆವರಣದಲ್ಲಿ ನಡೆದಿರುವ ಅಭ್ಯಾಸವು ದೇಶದ ವೈವಿಧ್ಯತೆಯನ್ನು ಯೋಗದ ಒಂದೇ ಸೂತ್ರದಲ್ಲಿ ಕೂಡಿಸುತ್ತದೆ’ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರು ಸುಮಾರು 45  ನಿಮಿಷಕ್ಕೂ ಹೆಚ್ಚು ಕಾಲ ಯೋಗಾಭ್ಯಾಸ ಮಾಡಿದರು. ನಿಂತು, ಕುಳಿತು ಮತ್ತು ಮಲಗಿ ಮಾಡುವ ಹಲವು ಆಸನಗಳನ್ನು ಹಾಗೂ ಪ್ರಾಣಾಯಾಮವನ್ನು ಅವರು ನಿರಾಯಾಸವಾಗಿ ಮಾಡಿದ್ದನ್ನು ಕಂಡು ನೆರೆದವರು ಹುಬ್ಬೇರಿಸಿದರು. ಕಪಾಲ ಭಾತಿ, ಶವಾಸನ, ಪ್ರಾಣಾಯಾಮ ಸೇರಿದಂತೆ 40  ನಿಮಿಷಗಳಲ್ಲಿ 19  ಯೋಗ ಭಂಗಿಗಳನ್ನು ಪ್ರದರ್ಶಿಸಲಾಯಿತು.

 

 

ಯೋಗದಿಂದ ವಿಶ್ವಕ್ಕೆ ಶಾಂತಿ ಯೋಗದಿಂದ ಆರೋಗ್ಯ ವೃದ್ಧಿಯಾಗಿ ನಿರೋಗಿಯಾಗಲು ಸಾಧ್ಯ. ಜಗತ್ತಿನ ಹಲವು ಸಮಸ್ಯೆಗಳಿಗೆ ಯೋಗವೇ ಮದ್ದು ಎಂದು ಪ್ರಧಾನಮಂತ್ರಿ  ಮೋದಿ  ಹೇಳಿದರು.

ಋಷಿಮುನಿಗಳು ಯೋಗದಿಂದ ವಿಶ್ವಕ್ಕೆ ಶಾಂತಿ ಎಂಬ ಸಂದೇಶ ಸಾರಿದ್ದರು. ಯೋಗದಿಂದ ಸಮಾಜ, ದೇಶ, ವಿಶ್ವಕ್ಕೆ ಶಾಂತಿ ದೊರೆಯುತ್ತದೆ ಎಂದರು.

ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಆಧ್ಯಾತ್ಮ ಮತ್ತು ಯೋಗ ಸಾಧಕರ ನೆಲೆಬೀಡು ಮೈಸೂರಿಗೆ ಪ್ರಣಾಮ ಎಂದು ಹೇಳುವ ಮೂಲಕ ಮಾತು ಆರಂಭಿಸಿದ ಪ್ರಧಾನಿಗಳು, ಎಲ್ಲರಿಗೂ ಯೋಗ ದಿನದ ಶುಭಾಶಯ ಕೋರಿದರು.

ಯೋಗವು ಇಂದು ವಿಶ್ವಾದ್ಯಂತ ವ್ಯಾಪಿಸಿದೆ. ಪ್ರಪಂಚದ ಮೂಲೆ ಮೂಲೆಗಳಲ್ಲೂ ಯೋಗಾಭ್ಯಾಸ ಮಾಡಲಾಗುತ್ತಿದೆ. ಯೋಗದಿಂದ ವಿಶ್ವದ ಜನರೆಲ್ಲಾ ನಿರೋಗಿಯಾಗಿರಲು ಸಾಧ್ಯವಿದೆ ಎಂದು ಹೇಳಿದರು.
ಭಾರತ ಎಂದಿಗೂ ವಿಶ್ವದ ಶಾಂತಿಯನ್ನು ಬಯಸಿದ ದೇಶ. ಯೋಗದಿಂದ ಸಮಾಜಕ್ಕೆ, ವಿಶ್ವಕ್ಕೆ ಒಳಿತಾಗಲಿದೆ. ಯೋಗದಿಂದ ಉಂಟಾಗುವ ನೆಮ್ಮದಿಯ ಭಾವವನ್ನು ಸಂಭ್ರಮಿಸೋಣ ಎಂದು ಪ್ರಧಾನಿ ಮೋದಿ ಹೇಳಿದರು.
ಯೋಗವು ಜಗತ್ತಿನ ಹಲವು ಸಮಸ್ಯೆಗಳಿಗೆ ಉತ್ತಮ ಮದ್ದು ಎನಿಸಿದೆ. ನಾವೀಗ ಭಾರತ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಸಂಭ್ರಮದಲ್ಲಿದ್ದೇವೆ. ದೇಶದ ೭೫ ವಿವಿಧ ನಗರಗಳಲ್ಲಿ, ಐತಿಹಾಸಿಕ ಸ್ಥಳಗಳಲ್ಲಿ ಇಂದು ಯೋಗ ದಿನಾಚರಣೆ ನಡೆದಿದೆ. ಇದು ಭಾರತದ ಇತಿಹಾಸ ಮತ್ತು ಸಾಂಸ್ಕೃತಿಕ ಔನ್ಯತ್ಯಕ್ಕೆ ಸಾಕ್ಷಿಯಾಗಿದೆ ಎಂದರು.

ವಿಶ್ವ ಮಟ್ಟದಲ್ಲಿ ಗಾರ್ಡಿಯನ್ ರಿಂಗ್ ಆಫ್ ಯೋಗ ಹೆಸರಿನಲ್ಲಿ ಜನಜನೀತವಾಗಿದೆ ಎಂದರು.
ಯೋಗದಿಂದ ನಾವೆಲ್ಲರೂ ಬೆಸೆದುಕೊಳ್ಳಲು ದೊಡ್ಡ ಅವಕಾಶ ಸಿಕ್ಕಿದೆ. ಈಗ ಯುವಕರು ಹೊಸ ಹೊಸ ಆಲೋಚನೆಗಳೊಂದಿಗೆ ಯೋಗದ ಸ್ಥಳಕ್ಕೆ ಬರುತ್ತಿದ್ದಾರೆ. ಸ್ಟ್ಯಾಟಪ್ ಅವಕಾಶಗಳು ಇವೆ ಎಂದರು.
ಯೋಗವು ನಮ್ಮೊಳಗಿನ ಎಲ್ಲವನ್ನು ಜಾಗೃತಗೊಳಿಸುತ್ತದೆ ಮತ್ತು ಅರಿವು ಪ್ರಜ್ಞೆಯನ್ನು ನಿರ್ಮಿಸುತ್ತದೆ. ನಾವು ಎಷ್ಟೇ ಒತ್ತಡದಲ್ಲಿದ್ದರೂ ಕೆಲವು ನಿಮಿಷಗಳ ಧ್ಯಾನ ನಿಮಗೆ ವಿಶ್ರಾಂತಿ ನೀಡುತ್ತದೆ. ನಮ್ಮ ಚೈತನ್ಯವನ್ನು ಹೆಚ್ಚಿಸುತ್ತದೆ. ಹಾಗಾಗಿ  ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

[t4b-ticker]

You May Also Like

More From Author

+ There are no comments

Add yours