ವೇಣೂರು: ಮೂಡುಕೋಡಿಯ ಉಂಬೆಟ್ಟು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಡಿ. 5 ರಿಂದ 11ರವರೆಗೆ ನಡೆಯಲಿರುವ ಮೂಡುಬಿದಿರೆ ಶ್ರೀ ಧವಲಾ ಕಾಲೇಜಿನ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆಯು ನಾಳೆ ಅಪರಾಹ್ನ 3-30೦ರಿಂದ ನಡೆಯಲಿದೆ.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಶಿಬಿರವನ್ನು ಉದ್ಘಾಟಿಸಲಿದ್ದು, ಕಾಲೇಜಿನ ಪ್ರಾಚಾರ್ಯರಾದ ಪ್ರೊ. ಪಾರ್ಶ್ವನಾಥ ಅಜ್ರಿ ಅಧ್ಯಕ್ಷತೆ ವಹಿಸಲಿದ್ದಾರೆ. ಡಿಜೆವಿ ಸಂಘದ ಕಾರ್ಯದರ್ಶಿ ಅಭಿಜಿತ್ ಎಂ. ಅವರು ಶ್ರಮದಾನಕ್ಕೆ ಚಾಲನೆ ನೀಡಲಿದ್ದು, ವೇಣೂರು ಗ್ರಾ.ಪಂ. ಅಧ್ಯಕ್ಷೆ ಮಲ್ಲಿಕಾ ಕಾಶಿನಾಥ್ ಹೆಗ್ಡೆ, ವೇಣೂರು ಪ್ರಾಥಮಿಕ ಕೃ.ಪ.ಸ. ಸಂಘದ ಅಧ್ಯಕ್ಷ ಸುಂದರ ಹೆಗ್ಡೆ ಬಿಇ ಸೇರಿದಂತೆ ಹಲವು ಅತಿಥಿ ಗಣ್ಯರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಆಯೋಜಕರ ಪ್ರಕಟಣೆ ತಿಳಿಸಿದೆ.





