ಅನಧಿಕೃತ ಜಾನುವಾರು ಸಾಗಾಟ ಹಾಗೂ ವಧೆ ತಡೆಗೆ ಸಮಿತಿ ರಚಿಸಲು ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ ಸೂಚನೆ

 

 

 

 

ಚಿತ್ರದುರ್ಗ (ಕರ್ನಾಟಕ ವಾರ್ತೆ) ಜುಲೈ 02: ಅನಧಿಕೃತ ಜಾನುವಾರು ಸಾಗಾಟ ಹಾಗೂ ವಧೆ ತಡೆಗೆ ತಾಲೂಕು ಮಟ್ಟದಲ್ಲಿ ಸಮಿತಿ ರಚಿಸಬೇಕು. ಜುಲೈ 10ರಂದು ರಾಜ್ಯಾದ್ಯಂತ ಬಕ್ರೀದ್ ಹಬ್ಬದ ಆಚರಣೆ ಮಾಡಲಾಗುವುದು. ಈ ಸಂದರ್ಭದಲ್ಲಿ ಯಾವುದೇ ತರಹದ ಜಾನುವಾರುಗಳನ್ನು ವಧೆ ಮಾಡದಂತೆ ತಡೆಗಟ್ಟುವ ಸಲುವಾಗಿ, ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಶಾಂತಿ ಸೌಹಾರ್ಧ ಸಭೆಗಳನ್ನು ಆಯೋಜಿಸಿ, ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜಿಲ್ಲಾ ಪ್ರಾಣಿ ದಯಾ ಸಂಘದ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈಗಾಗಲೇ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿರುವುದರಿಂದ ರಾಜ್ಯದಲ್ಲಿ ಎಲ್ಲ ದನ, ಕರು, ಒಂಟೆಗಳು 13 ವರ್ಷದೊಳಗಿನ ಎಮ್ಮೆ, ಕೋಣಗಳನ್ನು ಅಕ್ರಮ ಸಾಗಾಣಿಕೆ ಹಾಗೂ ವಧೆ ಮಾಡುವುದನ್ನು ನಿಷೇಧಿಸಲಾಗಿದೆ. ಅನಧಿಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಣಿಕೆ ತಡೆಗಟ್ಟುವಿಕೆ ಸಂಬಂಧ ಪ್ರಮುಖ ರಸ್ತೆಗಳ ಚೆಕ್‍ಪೋಸ್ಟ್ ನಿರ್ಮಿಸಿ ತಪಾಸಣೆ ಮಾಡಬೇಕು. ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ಯಾವುದೇ ಜಾನುವಾರುಗಳು ವಧೆಯಾಗದಂತೆ ಕ್ರಮವಹಿಸಬೇಕು. ಈ ಕುರಿತು ತಾಲೂಕು ಮಟ್ಟದ ಸಮಿತಿಗಳು, ಜಿಲ್ಲಾ ಮಟ್ಟದ ಸಮಿತಿ ವರದಿ ಸಲ್ಲಿಸಬೇಕು. ಅಕ್ರಮವಾಗಿ ಜಾನುವಾರ ಸಾಗಾಟ ಮಾಡುವ ಕುರುತು ಮಾಹಿತಿ ಲಭಿಸಿದರೆ ತಕ್ಷಣವೇ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು. ಗೋ ಹತ್ಯ ನಿಷೇಧ ಕಾಯ್ದೆಯ ಉಲಂಘನೆ ಕಂಡುಬಂದರೆ ಪ್ರಕರಣ ದಾಖಲಿಸಬೇಕು ಎಂದರು.
ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆ ಉಪನಿರ್ದೇಶಕ ಡಾ.ಕಲ್ಲಪ್ಪ ಮಾತನಾಡಿ, 2021ರ ಗೋ ಹತ್ಯ ನಿಷೇಧ ಕಾಯ್ದೆ ರಾಜ್ಯದಲ್ಲಿ ಜಾರಿಯಿದೆ. ಕಾಯ್ದೆಯ ಅನುಸಾರ ಪೊಲೀಸ್ ಸಬ್ ಇನ್ಸಪೆಕ್ಟರ್ ಹಾಗೂ ಪಶು ವೈದ್ಯಾಧಿಕಾರಿ ಹಂತ ಮೇಲಿನ ಅಧಿಕಾರಿಗಳು ಕಾಯ್ದೆ ಉಲಂಘನೆಯ ಪ್ರಕರಣ ದಾಖಲಿಸಬೇಕು. ಪ್ರಕರಣವನ್ನು ಉಪವಿಭಾಗಧಿಕಾರಿಗಳ ನ್ಯಾಯಾಲಯಕ್ಕೆ ಸಲ್ಲಿಸಲಾಗುತ್ತದೆ. ಮೊದಲ ಬಾರಿ ತಪ್ಪಿತಸ್ಥರು ಎಂದು ಕಂಡು ಬಂದರೆ 50 ಸಾವಿರದಿಂದ 5 ಲಕ್ಷ ರೂಪಾಯಿವರೆಗೆ ದಂಡ ವಿಧಿಸಲಾಗುತ್ತದೆ. 3 ವರ್ಷದಿಂದ 7 ವರ್ಷದ ವರೆಗೆ ಸಜೆ ನೀಡಲಾಗುತ್ತದೆ. ಪದೇ ಪದೇ ಕಾಯ್ದೆಯ ಉಲಂಘನೆ ಮಾಡಿದರೆ 1 ಲಕ್ಷದಿಂದ 10 ಲಕ್ಷ ರೂಪಾಯಿವರೆಗೆ ದಂಡ, 7 ರಿಂದ 10 ವರ್ಷಗಳ ಸಜೆ ವಿಧಿಸಲಾಗುತ್ತದೆ. 10 ಕಿ.ಮೀ. ವ್ಯಾಪ್ತಿಯಲ್ಲಿ ಜಾನುವಾರು ಸಾಗಾಟ ಮಾಡಲು ಯಾವುದೇ ಪರವಾಗಿಯ ಅಗತ್ಯವಿಲ್ಲ. ಇದಕ್ಕೂ ಮೆಲ್ಪಟ್ಟ ಸಾಗಾಣಿಕೆ ಕಡ್ಡಾಯವಾಗಿ ಪರವನಾಗಿ ಪಡೆಯಬೇಕು. ಪಶುವೈದ್ಯಾಧಿಕಾರಿಗಳು ಪ್ರಮಾಣ ಪತ್ರ ನೀಡಬೇಕು. ಕೃಷಿ, ಜಾನುವಾರ ಸಾಕಣಿ ಹಾಗೂ ಸಂಶೋಧನೆಗೆ ಮಾತ್ರ ಜಾನುವಾರು ಸಾಗಾಟ ಮಾಡಲು ಅವಕಾಶವಿದೆ. ಜಿಲ್ಲೆಯಲ್ಲಿ 10 ಗೋಶಾಲೆಗಳು ಕಾರ್ಯನಿರ್ವಹಿಸುತ್ತಿವೆ. ಒಟ್ಟು 4 ಗೋಶಾಲೆಗಳನ್ನು ಜಿಲ್ಲೆಯಲ್ಲಿ ಸರ್ಕಾರ ವತಿಯಿಂದ ತರೆಯಲಾಗುವುದು ಎಂದರು.
ಸಭೆಯಲ್ಲಿ ಎಲ್ಲಾ ತಾಲೂಕುಗಳ ಪಶುವೈದ್ಯಾಧಿಕಾರಿಗಳು, ತಹಶೀಲ್ದಾರ್ ಕಚೇರಿ, ಸಾರಿಗೆ ಇಲಾಖೆ, ನಗರ ಸಭೆ, ಮಾಲಿನ್ಯ ನಿಯಂತ್ರಣ ಮಂಡಳಿ ಪರಿಸರ ಅಧಿಕಾರಿಗಳು, ಪ್ರಾಣಿ ದಯಾ ಸಂಘದ ಅಧ್ಯಕ್ಷರು ಸದಸ್ಯರು ಉಪಸ್ಥಿತರಿದ್ದರು.

 

 

[t4b-ticker]

You May Also Like

More From Author

+ There are no comments

Add yours