ಕರ್ನಾಟಕ ಅಲೆಮಾರಿ ಮತ್ತು ಅರೆಅಲೆಮಾರಿ ಅಭಿವೃದ್ಧಿ ನಿಗಮ :ಸಹಾಯಧನಕ್ಕೆ ಅರ್ಜಿ ಆಹ್ವಾನ

 

 

 

 

ಚಿತ್ರದುರ್ಗ (ಕರ್ನಾಟಕ ವಾರ್ತೆ) ಜುಲೈ 02:
2020-21ನೇ ಸಾಲಿನಲ್ಲಿ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಕ್ಕೆ ಸೇರಿದ ಜನರ ಆರ್ಥಿಕ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯ ಪಡೆಯಲು https://suvidha.karnataka.in  ವೆಬ್‍ಸೈಟ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 3 ಕೊನೆಯ ದಿನವಾಗಿದೆ.
ಸ್ವಯಂ ಉದ್ಯೋಗ ನೇರ ಸಾಲ ಯೋಜನೆ ಅಡಿಯಲ್ಲಿ ಸೌಲಭ್ಯ ಪಡೆಯಲು ಬಯಸುವ ಹಿಂದುಳಿದ ವರ್ಗಗಳ ಅಲೆಮಾರಿ, ಅರೆ ಅಲೆಮಾರಿ ಇದರ ಉಪಜಾತಿಗಳ ಸ್ವಯಂ ಉದ್ಯೋಗಕ್ಕೆ  ವ್ಯಾಪಾರ, ಕೈಗಾರಿಕೆ, ಸಾರಿಗೆ ಮತ್ತು ಸೇವಾಲಯ, ಸಾಂಪ್ರದಾಯಿಕ ವೃತ್ತಿಗಳು ಹಾಗೂ ವೃತ್ತಿ ಕಸುಬುದಾರರಿಗೆ ಆರ್ಥಿಕ ಚಟುವಟಿಕೆ ಕೈಗೊಳ್ಳಲು 2 ಲಕ್ಷಗಳವರೆಗೆ ಸಾಲ ಮತ್ತು ಸಹಾಯಧನ ನೆರವು ನೀಡಲಾಗುವುದು.
ಅರಿವು ಶೈಕ್ಷಣಿಕ ಸಾಲ (ನವೀಕರಣ) : ಅಲೆಮಾರಿ ಮತ್ತು ಅರೆಅಲೆಮಾರಿ ಜನಾಂಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಈಗಾಗಲೇ ಕಳೆದ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ (ನವೀಕರಣ) ಯೋಜನೆ ಅಡಿಯಲ್ಲಿ ಸೌಲಭ್ಯ ಪಡೆದ ವಿದ್ಯಾರ್ಥಿಗಳಿಗೆ 2022-23ನೇ ಸಾಲಿನಲ್ಲಿ  ವ್ಯಾಸಾಂಗ ಮಾಡುತ್ತಿದ್ದಲ್ಲಿ ಮುಂದುವರಿದ ಕಂತುಗಳಿಗೆ  ಅರ್ಜಿ ಆಹ್ವಾನಿಸಲಾಗಿದೆ.
ಅರ್ಹತೆಗಳು: ಅರ್ಜಿದಾರರು ಅಲೆಮಾರಿ ಮತ್ತು ಅರೆಅಲೆಮಾರಿ ಜನಾಂಗಕ್ಕೆ  ಸೇರಿರಬೇಕು.  ಕುಟುಂಬದ ವಾರ್ಷಿಕ ಆದಾಯ ಗ್ರಾಮಾಂತರ ಪ್ರದೇಶದವರಿಗೆ 98,000 ಪಟ್ಟಣ ಪ್ರದೇಶದವರಿಗೆ 1,20,000ದ ಒಳಗಿರಬೇಕು. 18ರಿಂದ 55 ವರ್ಷದೊಳಗಿರಬೇಕು. ಆಧಾರ್ ಕಾರ್ಡ್ ಲಿಂಕ್ ಹೊಂದಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಚಾಲ್ತಿಯಲ್ಲಿರುವ ಜಾತಿ, ಆದಾಯ ಪ್ರಮಾಣ ಪತ್ರ ಹೊಂದಿರಬೇಕು.
ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ಕಚೇರಿ ದೂರವಾಣಿ ಸಂಖ್ಯೆ 08194-220882 ಗೆ ಸಂಪರ್ಕಿಸಬೇಕು ಎಂದು ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ ಜಿಲ್ಲಾ ವ್ಯವಸ್ಥಾಪಕ ಬಿ.ವಿ.ವೆಂಕಟರಾಜು ತಿಳಿಸಿದ್ದಾರೆ.

 

 

[t4b-ticker]

You May Also Like

More From Author

+ There are no comments

Add yours