ಬುಡಕಟ್ಟು ಜನಾಂಗದ ಮಹಿಳೆಗೆ ಡೀಸೆಲ್ ಸುರಿದು ಬೆಂಕಿ ಹಚ್ಚಿದ ಕಿಡಿಗೇಡಿಗಳು.

 

 

 

 

ಭೋಪಾಲ್: ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಬುಡಕಟ್ಟು ಜನಾಂಗಕ್ಕೆ ಸೇರಿದ   ಮಹಿಳೆಯನ್ನು 38 ವರ್ಷದ ರಾಂಪ್ಯಾರಿ ಬಾಯಿ ಎಂದು ಗುರುತಿಸಲಾಗಿದೆ.  ರಾಂಪ್ಯಾರಿ ತನ್ನ ಜಮೀನಿಗೆ ಹೋದಾಗ ಈ ಘಟನೆ ನಡೆದಿದೆ. ಮೂವರು ಪುರುಷರು ಮಹಿಳೆಗೆ ಡೀಸೆಲ್ ಸುರಿದು ಬೆಂಕಿ ಹಚ್ಚಿದ್ದರಿಂದ ಆಕೆ ಕಿರುಚಾಟ ಆರಂಭಿಸಿದ್ದಾಳೆ. ಈ ವೇಳೆ ಅಲ್ಲೇ ಇದ್ದ ಗ್ರಾಮಸ್ಥರ ಗುಂಪೊಂದು ಕ್ಯಾಮರಾದಲ್ಲಿ ಘಟನೆಯನ್ನು ಚಿತ್ರೀಕರಿಸಿದ್ದು, ರಾಂಪ್ಯಾರಿಯನ್ನು ಸ್ಥಳೀಯರು ಕೂಡಲೇ ಆಸ್ಪತ್ರಗೆ ದಾಖಲಿಸಿದ್ದಾರೆ. ಮಹಿಳೆಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು 80 ಪ್ರತಿಶತದಷ್ಟು ಸುಟ್ಟಗಾಯಗಳಿಂದ ಬಳಲುತ್ತಿದ್ದಾರೆ. ಅವರ ಸ್ಥಿತಿ ಗಂಭೀರವಾಗಿದೆ ಎಂದಿದ್ದಾರೆ.

 

 

[t4b-ticker]

You May Also Like

More From Author

+ There are no comments

Add yours