ಸರ್ಕಾರಿ ಇಲಾಖೆಗಳಲ್ಲಿ ಫೋಟೋ ,ವಿಡಿಯೋ ಬ್ಯಾನ್: ಸರ್ಕಾರ ಆದೇಶ

 

 

 

 

ಬೆಂಗಳೂರು: ರಾಜ್ಯ ಸರ್ಕಾರದ   ಎಲ್ಲಾ ಇಲಾಖೆಗಳ  ಕಚೇರಿಗಳಲ್ಲಿ ಇನ್ನು ಮುಂದೆ ಇಲಾಖೆಯ   ಅನುಮತಿಯಿಲ್ಲದೆ ಸಾರ್ವಜನಿಕರು ಅನಧಿಕೃತವಾಗಿ ಫೋಟೋ/ವಿಡಿಯೋ ಮಾಡದಂತೆ ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ.

 

 

ರಾಜ್ಯ ನೌಕರರ ಸಂಘದ ಮನವಿ ಮೇರೆಗೆ ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖೆ ಈ ಆದೇಶ ಹೊರಡಿಸಿದೆ.
ನೌಕರರ ಸಂಘ ತಮ್ಮ ಮನವಿಯಲ್ಲಿ  ಎಲ್ಲಾ ಜಿಲ್ಲೆ, ತಾಲೂಕು ಹಾಗೂ ರಾಜ್ಯ ಮಟ್ಟದಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಕಚೇರಿಗಳು ಕಾರ್ಯನಿರ್ವಹಿಸುತ್ತಿದ್ದು, ಸರ್ಕಾರಿ ಕಚೇರಿಗಳಿಗೆ ಆಗಮಿಸುವ ಕೆಲವರು ಕಚೇರಿಯ ಫೋಟೋ/ವಿಡಿಯೋಗಳನ್ನು ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಆ ಮೂಲಕ ಇಲಾಖೆ, ಸರ್ಕಾರದ ಘನತೆಗೆ ಕುಂದುಂಟಾಗುತ್ತಿದೆ. ಹೀಗಾಗಿ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಫೋಟೋ, ವಿಡಿಯೋ ಮಾಡದಂತೆ ನಿರ್ಬಂಧಿಸುವಂತೆ ಮನವಿ ಮಾಡಿತ್ತು.

[t4b-ticker]

You May Also Like

More From Author

+ There are no comments

Add yours