ಬಿಜೆಪಿ ಹೊಸ ರಾಜ್ಯಾಧ್ಯಕ್ಷರ ಹೆಸರು ಫೈನಲ್?

 

 

 

 

ಬೆಂಗಳೂರು:  ಮುಂದಿನ ಬಿಜೆಪಿ ರಾಜ್ಯಾಧ್ಯಕ್ಷರ ಹೆಸರು ಫೈನಲ್ ಆಗಿದ್ದು ಅಧಿಕೃತ ಬಾಕಿ ಒಂದೇ ಘೋಷಣೆ ಮಾಡಬೇಕಿದೆ ಎಂದಿರುವ ಮೂಲಗಳ ಪ್ರಕಾರ  ಸಚಿವ ಸುನಿಲ್ ಕುಮಾರ್ ಅವರಿಗೆ ಅದೃಷ್ಟ ಒಲಿಯಬಹುದು ಎಂದು ಹೇಳಲಾಗುತ್ತಿದೆ.

 

 

ನಳಿನ್ ಕುಮಾರ್ ಕಟೀಲ್ ಅವರ ಅಧಿಕಾರಾವಧಿ ಆಗಸ್ಟ್ ತಿಂಗಳಿನಲ್ಲಿ ಅಂತ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಇಂದು ಖಾಸಗಿ ರೆಸಾರ್ಟ್ ನಲ್ಲಿ ನಡೆದ ಬಿಜೆಪಿ ಚಿಂತನ ಮಂಥನ ಸಭೆಯಲ್ಲಿ ಸುನಿಲ್ ಕುಮಾರ್ ರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಬೆಕು ಎಂದು ತೀರ್ಮಾನಿಸಲಾಗಿದೆ ಎಂಬ ಮಾತು ಬಿಜೆಪಿ ವಲಯದಲ್ಲಿ ಕೇಳಿ ಬರುತ್ತಿದೆ.

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌ ಸಂತೋಷ್‌, ನಳಿನ್ ಕುಮಾರ್ ಕಟೀಲ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಪ್ರಮುಖ ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು.

[t4b-ticker]

You May Also Like

More From Author

+ There are no comments

Add yours