ಡಿ.ದೇವರಾಜ ಅರಸು ಹಿಂದುಳಿದ ಅಭಿವೃದ್ಧಿ ನಿಗಮದಿಂದ ಸಾಲಸೌಲಭ್ಯಕ್ಕಾಗಿ ಅರ್ಜಿ

 

 

 

 

ಚಿತ್ರದುರ್ಗ (ಕರ್ನಾಟಕ ವಾರ್ತೆ) ಜುಲೈ 16:
ಪ್ರಸಕ್ತ ಸಾಲಿಗೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಜನರ ಆರ್ಥಿಕ ಅಭಿವೃದ್ಧಿಗಾಗಿ ಸಾಲಸೌಲಭ್ಯ ಪಡೆಯಲು https://suvidha.karnataka.inನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 24 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಅರಿವು ಶೈಕ್ಷಣಿಕ ಸಾಲ ಯೋಜನೆ ನವೀಕರಣ ಯೋಜನೆಯಡಿಯಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಹಿಂದುಳಿದ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ  ಕಳೆದ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿಯಲ್ಲಿ ಸೌಲಭ್ಯ ಪಡೆದ ವಿದ್ಯಾರ್ಥಿಗಳಿಗೆ ಪ್ರಸಕ್ತ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿದ್ದಲ್ಲಿ ಮುಂದುವರಿದ ಕಂತುಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಡಿ.ದೇವರಾಜ ಅರಸು ಸ್ವಯಂ ಉದ್ಯೋಗ  ವೈಯಕ್ತಿಕ ಸಾಲ ಯೋಜನೆಯಡಿಯಲ್ಲಿ  ಗರಿಷ್ಠ 2 ಲಕ್ಷಗಳವರೆಗೆ ಆರ್ಥಿಕ ನೆರವು ನೀಡಲಾಗುವುದು.
ಅರ್ಹತೆಗಳು: ಅರ್ಜಿದಾರರು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 2ಬಿಗೆ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯಿತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ ಮತ್ತು ಇದರ ಉಪ ಸಮುದಾಯಗಳು ಹೊರತುಪಡಿಸಿ) ಸೇರಿರಬೇಕು. ಕುಟುಂಬದ ವಾರ್ಷಿಕ ಆದಾಯ ಗ್ರಾಮಾಂತರ ಪ್ರದೇಶದವರಿಗೆ 98,000 ಪಟ್ಟಣ ಪ್ರದೇಶದವರಿಗೆ 1,20,000ದ ಒಳಗಿರಬೇಕು. 18ರಿಂದ 55 ವರ್ಷದೊಳಗಿರಬೇಕು. ಆಧಾರ್ ಕಾರ್ಡ್ ಲಿಂಕ್ ಹೊಂದಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಚಾಲ್ತಿಯಲ್ಲಿರುವ ಜಾತಿ, ಆದಾಯ ಪ್ರಮಾಣ ಪತ್ರ ಹೊಂದಿರಬೇಕು.
ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ಕಚೇರಿ ದೂರವಾಣಿ ಸಂಖ್ಯೆ 08194-220882 ಗೆ ಸಂಪರ್ಕಿಸಬೇಕು ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಬಿ.ವಿ.ವೆಂಕಟರಾಜು ತಿಳಿಸಿದ್ದಾರೆ.

 

 

[t4b-ticker]

You May Also Like

More From Author

+ There are no comments

Add yours