ಮಾಜಿ ಸೈನಿಕರ ಮಕ್ಕಳಿಗೆ ಪುಸ್ತಕ ಅನುದಾನ ಹಾಗೂ ಶಿಷ್ಯ ವೇತನಕ್ಕಾಗಿ ಅರ್ಜಿ

 

 

 

 

ಚಿತ್ರದುರ್ಗ (ಕರ್ನಾಟಕ ವಾರ್ತೆ) ಜುಲೈ 16:
ಮಿಲಿಟರಿ ಪಿಂಚಣಿ ರಹಿತ ಮಾಜಿ ಸೈನಿಕರ ಹಾಗೂ ಕರ್ನಾಟಕದಲ್ಲಿ ನೆಲೆಸಿರುವ ಹೊರರಾಜ್ಯದ ಮಿಲಿಟಲಿ ಪಿಂಚಣಿದಾರರ ಮಾಜಿ ಸೈನಿಕರ ಮಕ್ಕಳಿಗೆ (ಅಧಿಕಾರಿಗಳನ್ನು ಹೊರತುಪಡಿಸಿ) ಕರ್ನಾಟ ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಒಂದನೇ ತರಗತಿಯಿಂದ ದ್ವಿತೀಯ ಪಿಯುಸಿ ಓದುವ ಮಕ್ಕಳಿಗೆ ಪುಸ್ತಕ ಅನುದಾನಕ್ಕೆ ಹಾಗೂ ಡಿಗ್ರಿ, ಡಿಪ್ಲೋಮಾ, ಜೆಒಸಿ, ಪ್ರೊಪೆಶನಲ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಅರ್ಜಿ ಆಹ್ವಾನಿಸಲಾಗಿದೆ. ನವೆಂಬರ್ 30ರೊಳಗೆ ಅರ್ಜಿ ಸಲ್ಲಿಸಬಹುದು.
ಅರ್ಜಿಗಳನ್ನು ಶಿವಮೊಗ್ಗದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಚೇರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಕಚೇರಿಯ ದೂರವಾಣಿ ಸಂಖ್ಯೆ 08182-220925ಗೆ ಸಂಪರ್ಕಿಸಬಹುದು ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

 

 

[t4b-ticker]

You May Also Like

More From Author

+ There are no comments

Add yours