ದೇಶದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆ

 

 

 

 

ದೆಹಲಿ: 2022 ದ್ರೌಪದಿ ಮುರ್ಮು ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆ ಅಲಂಕರಿಸುವ ಮೊದಲ ಬುಡಕಟ್ಟು ಜನಾಂಗದ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.

 

 

ದೇಶದ 15ನೇ ರಾಷ್ಟ್ರಪತಿ ಆಯ್ಕೆಗೆ ನಡೆದ ಚುನವಾಣಾ ಫಲಿತಾಂಶ ಪ್ರಕಟವಾಗಿದ್ದು, ಎನ್​​ಡಿಎ ಅಭ್ಯರ್ಥಿ, ಜಾರ್ಖಂಡ್ ಮೂಲದ  ಮಾಜಿ ಗವರ್ನರ್ ಆಗಿದ್ದ ದ್ರೌಪದಿ ಮುರ್ಮು ಗೆಲುವು ತನ್ನದಾಗಿಸಿಕೊಂಡಿದ್ದಾರೆ.

ಈ ಮೂಲಕ ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆ ಅಲಂಕರಿಸುವ ಮೊದಲ ಬುಡಕಟ್ಟು ಜನಾಂಗದ ಮಹಿಳೆ ಎಂಬ ಹೆಗ್ಗಳಿಕೆಗೆ ಒಡಿಶಾ ಮೂಲದ ಮುರ್ಮು ಪಾತ್ರರಾಗಿದ್ದಾರೆ. 1958 ಜೂನ್ 20ರಂದು ಒಡಿಶಾದ ಮಯೂರ್ ಭಂಜ್ ಜಿಲ್ಲೆಯ ಉಪರಬೇದಾ ಗ್ರಾಮದಲ್ಲಿ ಸಂತಾಲ್ ಬುಡಕಟ್ಟು ಸಮುದಾಯದಲ್ಲಿ ಜನನ. ಬ್ಯಾಂಕ್ ಉದ್ಯೋಗಿಯಾಗಿದ್ದ ಶ್ಯಾಮ್ ಚರಣ್ ಮುರ್ಮು ಎಂಬವರನ್ನು ಮುರ್ಮು ವಿವಾಹವಾಗಿದ್ದು, 2014ರಲ್ಲಿ ಪತಿ ಸಾವಿಗೀಡಾಗಿದ್ದು. ಇಬ್ಬರು ಪುತ್ರರು ಕೂಡಾ ಮರಣ ಹೊಂದಿದ್ದು ಮಗಳು ಇತಿಶ್ರೀ ಮುರ್ಮು ಬ್ಯಾಂಕ್ ಉದ್ಯೋಗಿಯಾಗಿದ್ದಾರೆ.ರಾಜ್ಯ ರಾಜಕೀಯಕ್ಕೆ ಪ್ರವೇಶಿಸುವ ಮುನ್ನ ಮುರ್ಮು ಶಿಕ್ಷಕಿಯಾಗಿದ್ದರು . ರಾಯಿರಂಗ್ ಪುರದಲ್ಲಿ ಶ್ರೀ ಅರಬಂದೊ ಇಂಟೆಗ್ರಲ್ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಅವರು ಅಸಿಸ್ಟೆಂಟ್ ಪ್ರೊಫೆಸರ್ ಆಗಿದ್ದರು. ಒಡಿಶಾ ಸರ್ಕಾರ ನೀರಾವರಿ ಇಲಾಖೆಯಲ್ಲಿ ಜೂನಿಯರ್ ಅಸಿಸ್ಟೆಂಟ್ ಆಗಿಯೂ ಅವರು ಕಾರ್ಯ ನಿರ್ವಹಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours