ಯುವ ಪರಿವರ್ತಕರ ತರಬೇತಿಗೆ ಹುದ್ದೆಗೆ ಅರ್ಜಿ ಆಹ್ವಾನ

 

 

 

 

ಚಿತ್ರದುರ್ಗ (ಕರ್ನಾಟಕ ವಾರ್ತೆ) ಜುಲೈ 22:
ಜನಾರೋಗ್ಯ ಸಂಸ್ಥೆ, ಎಪಿಡೀಮಿಯಾಲಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಇವರಿಂದ ಅನುಷ್ಠಾನಗೊಂಡಿರುವ ಹಾಗೂ ರಾಜ್ಯ ಸರ್ಕಾರದ ಅನುದಾನಿತ ಯೋಜನೆಯಾದ ಯುವಜನ ಮಾನಸಿಕ ಆರೋಗ್ಯಕ್ಕೆ  ಪೂರಕ ಸೇವೆಗಳ ಸಮಗ್ರ ಅಭಿವೃದ್ಧಿ ಮತ್ತು ಅನುಷ್ಠಾನ ಯೋಜನೆ ಯುವ ಸ್ಪಂದನ ಕಾರ್ಯಕ್ರಮದ ಯುವ ಪರಿವರ್ತಕರ ಹಾಗೂ ಯುವ ಸಮಾಲೋಚಕರ ತರಬೇತಿಗಾಗಿ ಅರ್ಹ ಯುವತಿ, ಯುವಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 10 ಅರ್ಜಿ ಸಲ್ಲಿಸಲು ಕೊನೆಯ ದಿನ.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕರ್ನಾಟಕ ಯುವ ನೀತಿ 2012ರ ಅನ್ವಯ ಯುವಜನರನ್ನು ತಲುಪಿ ಯುವ ಜನರಿಂದಲೇ  ನಡೆಸಿ ಯುವಜನರನ್ನು ಸಬಲೀಕರಣಗೊಳಿಸಿ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಪೂರಕಗೊಳಿಸುವುದು ಈ ಯೋಜನೆಯ ಉದ್ದೇಶವಾಗಿದೆ.
ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ಪದವಿ ಹಾಗೂ ಮೇಲ್ಪಟ್ಟವರು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು (21ರಿಂದ 35 ವರ್ಷದೊಳಗಿರಬೇಕು), ಸ್ಥಳೀಯ ಭಾಷೆ ಕನ್ನಡವನ್ನು ಸ್ವಚ್ಛವಾಗಿ ಮಾತನಾಡಲು ಬರಬೇಕು, ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ, ಹುಮ್ಮಸ್ಸು,  ಹಾಗೂ ಉತ್ತಮ ಅಂತರ್‍ವ್ಯಕ್ತಿಯ ಸಂವಹನ ಕೌಶಲ್ಯದ ಜೊತೆಗೆ ಸಂವಾದ ಕೌಶಲ್ಯಗಳನ್ನು ಹೊಂದಿರಬೇಕು. ಜಿಲ್ಲೆಯಲ್ಲಿ ವಾಸಿಸುತ್ತಿರುವ ಖಾಯಂ ನಿವಾಸಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಅಭ್ಯರ್ಥಿಗಳು ತಮ್ಮ ಭಾವಚಿತ್ರದ ಸ್ವ ವಿವರದೊಂದಿಗೆ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಚಿತ್ರದುರ್ಗ ಕಚೇರಿಗೆ ಆಗಸ್ಟ್ 10ರ ಸಂಜೆ 4 ಗಂಟೆಯೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ : 08194235636, 7760374733ಗೆ ಸಂಪರ್ಕಿಸಬೇಕೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

 

 

[t4b-ticker]

You May Also Like

More From Author

+ There are no comments

Add yours