ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

 

 

 

 

ಚಿತ್ರದುರ್ಗ(ಕರ್ನಾಟಕ ವಾರ್ತೆ) ಜುಲೈ 30:
ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಪ್ರಸಕ್ತ ಸಾಲಿನಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಮುನ್ನಡೆ ಯೋಜನೆಯಲ್ಲಿ ಹಿಂದುಳಿದ ವರ್ಗಗಳ ಯುವ ಜನರಿಗೆ ಕೌಶಲ್ಯ ಅಭಿವೃದ್ಧಿಪಡಿಸಿ ಉದ್ಯೋಗಮುಖಿಯನ್ನಾಗಿಸಲು ಸರ್ಕಾರದ ಸಂಸ್ಥೆಗಳಾದ ಐಟಿಐ, ಜಿಟಿಟಿಸಿ, ಕೆಜಿಟಿಟಿಐನಲ್ಲಿ ಅಲ್ಪಾವಧಿ ಕೋರ್ಸ್‍ಗಳ ಮೂಲಕ ಕೌಶಲ್ಯ ತರಬೇತಿ ನೀಡಲು ಕೌಶಲ್ಯ ಕರ್ನಾಟಕ ತಂತ್ರಾಂಶದಲ್ಲಿ https://www.kaushalkar.com/ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.  ಆಗಸ್ಟ್ 29 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ (ನಿ)https://www.dbcdc.karnataka.gov.in, , ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ (ನಿ) https://kvcdcl.karnataka.gov.in –  – ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ (ನಿ) https://uppardevelopment.karnataka.gov.in,  ನಿಜಶರಣ ಅಭಿಂಗರ ಚೌಡಯ್ಯ ಅಭಿವೃದ್ಧಿ ನಿಗಮ(ನಿ) https://ambigaradevelopment.karnataka.gov.in,, ಕರ್ನಾಟಕ ಅಲೆಮಾರಿ ಮತ್ತು ಅರೆಅಲೆಮಾರಿ ಅಭಿವೃದ್ಧಿ ನಿಗಮ(ನಿ)https://kaad.karnataka.gov.in
ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ https://kmmd.dbcdc.karnataka.gov.in,  ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ (ನಿ) https://kssd.karnataka.gov.inರ್ನಾಟಕ ಒಕ್ಕಲಿಗ ಸಮದಾಯ ಅಭಿವೃದ್ಧಿ ನಿಗಮ (ನಿ) https://kvcdc.karnataka.gov.in, , ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ (ನಿ), https://kvldcl.karnataka.gov.in, , ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ (ನಿ)-https:/kmcdc.karnataka.gov.inದಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹತೆ: 10ನೇ ತರಗತಿ, ದ್ವಿತೀಯ ಪಿ.ಯು.ಸಿ, ಡಿಪ್ಲೋಮ, ಪದವಿ, ಇಂಜಿನಿಯರಿಂಗ್ ವ್ಯಾಸಂಗವನ್ನು ಪೂರ್ಣಗೊಳಿಸಿರಬೇಕು. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾತಿ ಪಟ್ಟಿಯಲ್ಲಿ ನಮೂದಿಸಿದ ಮೇಲ್ಕಂಡ ನಿಗಮಗಳ ವ್ಯಾಪ್ತಿಗೆ ಒಳಪಡುವ ಜಾತಿಗಳಿಗೆ ಸೇರಿದವರಾಗಿರಬೇಕು. ಅರ್ಜಿದಾರರ ವಯಸ್ಸು 18 ರಿಂದ 25 ವರ್ಷಗಳ ಒಳಗಿರಬೇಕು. ಪ್ರವರ್ಗ-01ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಕುಟುಂಬದ ವಾರ್ಷಿಕ ವರಮಾನ, ಆದಾಯದ ಮಿತಿ ಇರುವುದಿಲ್ಲ. ಪ್ರವರ್ಗ-2ಎ, 3ಎ, ಮತ್ತು 3ಬಿಗೆ ಸೇರಿದ ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ, ಆದಾಯ ಮಿತಿ ರೂ. 8 ಲಕ್ಷಗಳಿಗಿಂತ ಕಡಿಮೆ ಇರಬೇಕು.
ಹೆಚ್ಚಿನ ಮಾಹಿತಿಗಾಗಿ ನಿಗಮ ಜಿಲ್ಲಾ ಕಚೇರಿಯ ದೂರವಾಣಿ, ಸಹಾಯವಾಣಿ ಸಂಖ್ಯೆ :08194-220882ಗೆ ಸಂಪರ್ಕಿಸಬಹುದು ಎಂದು ಡಿ.ಬಿ.ಸಿ.ಡಿ.ಸಿ ಜಿಲ್ಲಾ ವ್ಯವಸ್ಥಾಪಕ ಬಿ.ವಿ.ವೆಂಕಟರಾಜು ತಿಳಿಸಿದ್ದಾರೆ.
========

 

 

[t4b-ticker]

You May Also Like

More From Author

+ There are no comments

Add yours