ಬಿಜೆಪಿ ದುರಾಡಾಳಿತಕ್ಕೆ ಜನರು ಬೇಸತ್ತಿದ್ದಾರೆ: ಡಿ.ಕೆ.ಶಿವಕುಮಾರ್

 

 

 

 

ಚಿತ್ರದುರ್ಗ: ಬಿಜೆಪಿ ದುರಾಡಳಿತಕ್ಕೆ ರಾಜ್ಯದ ಜನರು ಬೇಸತ್ತು ಹೋಗಿದ್ದು, ಕಾಂಗ್ರೆಸ್‌ಗೆ ಮತ ಹಾಕಲು ಕಾಯುತ್ತಿದ್ದಾರೆ. ಮತದಾರರ ಮನೆ ಬಾಗಿಲಿಗೆ ತೆರಳಿ ಅವರಿಗೆ ಧ್ವನಿಯಾಗಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಪಕ್ಷದ ನಾಯಕರಿಗೆ ತಾಕೀತು ಮಾಡಿದರು.

 

 

ತಾಲ್ಲೂಕಿನ ಸೀಬಾರದಲ್ಲಿರುವ ಮಾಜಿ ಮುಖ್ಯಮಂತ್ರಿ ಎಸ್‌.ನಿಜಲಿಂಗಪ್ಪ ಸ್ಮಾರಕದಲ್ಲಿ ಭಾನುವಾರ ನಡೆದ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು. ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಹೊರೆ ಹೆಚ್ಚಾಗಿದೆ. ಮೊಸರು, ಮಜ್ಜಿಗೆ, ಆಹಾರ ಧಾನ್ಯಗಳಿಗೂ ತೆರಿಗೆ ವಿಧಿಸಲಾಗಿದೆ. ಬ್ಯಾಂಕ್‌ ವ್ಯವಹಾರಕ್ಕೆ ಬಳಸುವ ಚೆಕ್‌ಬುಕ್‌ಗೂ ಜಿಎಸ್‌ಟಿ ವಿಧಿಸಲಾಗಿದೆ. ತೆರಿಗೆ ಹೊರೆಗೆ ಜನರು ಹೈರಾಣಾಗಿದ್ದಾರೆ. ಮತದಾರರ ಮನೆಗೆ ಭೇಟಿ ನೀಡಿ ಬಿಜೆಪಿ ದುರಾಡಳಿತದ ಬಗ್ಗೆ ಮನವರಿಕೆ ಮಾಡಿಕೊಡಿ’ ಎಂದು ಹೇಳಿದರು.

ಮುರುಘಾ ಮಠಕ್ಕೆ ಆಗಮಿಸಿದ ಡಿಕೆ ಶಿವಕುಮಾರ್ ಅವರಿಗೆ ಹೊಳಲ್ಕೆರೆ ಕಾಂಗ್ರೆಸ್ ಪಕ್ಷದ ವಿಧಾನಸಭೆಯ ಪ್ರಬಲ ಆಕಾಂಕ್ಷಿಯಾದ ಸವಿತಾ ರಘು ಬೆಂಬಲಿಗರು  ಹಾಗು ಡಿಕೆ ಅಭಿಮಾನಿಗಳು ಸೇಬಿನ ಹಾರ ಹಾಗೂ ಹೂವಿನ ಸುರಿಮಳೆಗೈಯ್ಯುವ ಮೂಲಕ ಭರ್ಜರಿ  ಸ್ವಾಗತ ಕೋರಿದರು.

[t4b-ticker]

You May Also Like

More From Author

+ There are no comments

Add yours