ಜಿಲ್ಲೆಯ 30 ಮಕ್ಕಳಿಗೆ ಷಟಲ್ ಬ್ಯಾಂಡ್ಮಿಂಟನ್‍ಗೆ ತರಬೇತಿ

 

 

 

 

ಚಿತ್ರದುರ್ಗ (ಕರ್ನಾಟಕ ವಾರ್ತೆ) ಆಗಸ್ಟ್ 04:
ಖೇಲೋ ಇಂಡಿಯಾ ಯೋಜನೆಯಡಿಯಲ್ಲಿ ಚಿತ್ರದುರ್ಗ ಜಿಲ್ಲೆಗೆ ಷಟಲ್ ಬ್ಯಾಡ್ಮಿಂಟನ್ ಕ್ರೀಡೆಯನ್ನು ಹಂಚಿಕೆ ಮಾಡಿರುತ್ತಾರೆ. ಈ ಯೋಜನೆಯಡಿಯಲ್ಲಿ ಷಟಲ್ ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ಜಿಲ್ಲೆಯ 30 ಮಕ್ಕಳಿಗೆ ಉಚಿತ ತರಬೇತಿ ನೀಡಲಾಗುವುದು.
ಷಟಲ್ ಬ್ಯಾಡ್ಮಿಂಟನ್ ತರಬೇತಿ ಪಡೆಯಲು ಇಚ್ಚಿಸುವ ಆಸಕ್ತಿಯುಳ್ಳ 6ರಿಂದ 14 ವರ್ಷದೊಳಗಿನ ಮಕ್ಕಳು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಚೇರಿಯಲ್ಲಿ ಬಂದು ಹೆಸರು ನೋಂದಾಯಿಸಿಕೊಳ್ಳಬೇಕು.
ಅಗತ್ಯ ದಾಖಲೆಗಳಾದ ಪಾರ್ಸ್‍ಪೋರ್ಟ್ ಸೈಜ್ ಫೋಟೋ, ಆಧಾರ್ ಕಾರ್ಡ್, ಜನನ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರವನ್ನು ಆಗಸ್ಟ್ 8ರೊಳಗಾಗಿ ಕಚೇರಿಗೆ ತಂದು ನೀಡುವಂತೆ ಚಿತ್ರದುರ್ಗ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

 

 

[t4b-ticker]

You May Also Like

More From Author

+ There are no comments

Add yours