ಗುಡ್ ನ್ಯೂಸ್:ಪ್ರವಾಸಿ ಟ್ಯಾಕ್ಸಿ ಖರೀದಿಗೆ ಅರ್ಜಿ ಆಹ್ವಾನ

 

 

 

 

ಚಿತ್ರದುರ್ಗ (ಕರ್ನಾಟಕ ವಾರ್ತೆ) ಆಗಸ್ಟ್ 26:
ಪ್ರವಾಸೋದ್ಯಮ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ 2013-14ನೇ ಸಾಲಿನಿಂದ 2019-20ನೇ ಸಾಲಿನವರೆಗೆ ಮತ್ತು ಅಲ್ಪಸಂಖ್ಯಾತರಿಗೆ 2016-17ನೇ ಸಾಲಿನಿಂದ 2017-18ನೇ ಸಾಲಿನವರೆಗೆ ಬಾಕಿ ಉಳಿದಿರುವ 2 ಲಕ್ಷ ಹಾಗೂ 3 ಲಕ್ಷಗಳು ಪ್ರವಾಸಿ ಟ್ಯಾಕ್ಸಿ ಖರೀದಿಗೆ ಸಹಾಯಧನದ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 29 ಕೊನೆಯ ದಿನವಾಗಿದೆ.
2013-14ನೇ ಸಾಲಿನಿಂದ 2016-17ನೇ ಸಾಲಿನವರೆಗೆ ಬಾಕಿ ಉಳಿದಿರುವ ಎಸ್‍ಸಿಎಸ್‍ಪಿ, ಟಿಎಸ್‍ಪಿ ಯೋಜನೆಯಡಿ ಪರಿಶಿಷ್ಟ ಜಾತಿಯ 13, ಪರಿಶಿಷ್ಟ ಪಂಗಡದ 09 ಅಭ್ಯರ್ಥಿಗಳು ಸೇರಿದಂತೆ ಒಟ್ಟು 22 ಅಭ್ಯರ್ಥಿಗಳಿಗೆ ತಲಾ ರೂ.2 ಲಕ್ಷಗಳು ಹಾಗೂ 2017-18ನೇ ಸಾಲಿನಿಂದ 2019-2ನೇ ಸಾಲಿನವರೆಗೆ ಬಾಕಿ ಉಳಿದಿರುವ ಎಸ್‍ಸಿಎಸ್‍ಪಿ, ಟಿಎಸ್‍ಪಿ ಯೋಜನೆಯಡಿ ಪರಿಶಿಷ್ಟ ಜಾತಿಯ 03 ಪರಿಶಿಷ್ಟ ಪಂಗಡದ 01 ಅಭ್ಯರ್ಥಿಗಳು ಸೇರಿದಂತೆ ಒಟ್ಟು 04 ಅಭ್ಯರ್ಥಿಗಳಿಗೆ ತಲಾ ರೂ.3ಲಕ್ಷ ಮತ್ತು 2016-17ನೇ ಸಾಲಿನ 04 ಅಭ್ಯರ್ಥಿಗಳು ಬಾಕಿ ಉಳಿದಿರುವ ಹಾಗೂ 2017-18ನೇ ಸಾಲಿನಲ್ಲಿ ಬಾಕಿ ಉಳಿದಿರುವ 01, ಒಟ್ಟು 05 ಯೋಜನೆಯಡಿ ಹಿಂದುಳಿದ ವರ್ಗಗಳ 04 ಅಭ್ಯರ್ಥಿಗಳು ಸೇರಿದಂತೆ 04 ಅಭ್ಯರ್ಥಿಗಳಿಗೆ ತಲಾ ರೂ.2 ಲಕ್ಷ ಹಾಗೂ ಒಬ್ಬ ಅಭ್ಯರ್ಥಿಗೆ ರೂ.03 ಲಕ್ಷ ಸಹಾಯಧನ ನೀಡಲಾಗುವುದು.
ಅರ್ಜಿಗಳನ್ನು ಆಗಸ್ಟ್ 30 ರಿಂದ ಸೆಪ್ಟೆಂಬರ್ 29 ರವರೆಗೆ ಪಡೆಯಬಹುದಾಗಿದೆ. ಆಸಕ್ತರು ಕಚೇರಿಯಿಂದ ಅರ್ಜಿಗಳನ್ನು ಪಡೆದು, ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

 

 

[t4b-ticker]

You May Also Like

More From Author

+ There are no comments

Add yours