ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ 150 ಸ್ಥಾನ :ಮಾಜಿ‌ ಸಿಎಂ ಬಿ.ಎಸ್.ಯಡಿಯೂರಪ್ಪ

 

 

 

 

ಬೆಂಗಳೂರು,ಸೆ.೧೦- ಮುಂದಿನ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನಗಳನ್ನು ಗೆದ್ದು ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.
ದೊಡ್ಡಬಳ್ಳಾಪುರದಲ್ಲಿ ನಡೆದ ಜನಸ್ಪಂದನ ಸಮಾವೇಶದಲ್ಲಿ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ೧೫೦ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಮತ್ತೆ ಅಧಿಕಾರದ ಗದ್ದುಗೆ ಏರುತ್ತೇವೆ ಎಂದು ಹೇಳಿ ಕೋಲಾರ, ಚಿಕ್ಕಬಳ್ಳಾಪುರ ಭಾಗದಲ್ಲೂ ಸಚಿವ ಸುಧಾಕರ್ ಅವರ ಪರಿಶ್ರಮದಿಂದ ಪಕ್ಷಕ್ಕೆ ಹೆಚ್ಚಿನ ಬಲ ಬಂದಿದೆ. ಈ ಭಾಗದಲ್ಲೂ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲಿದ್ದೇವೆ ಎಂದರು.
ನನ್ನ ಜೀವನದ ಬಹುತೇಕ ಸಮಯವನ್ನು ರೈತರ ಕಲ್ಯಾಣಕ್ಕೆ ಮೀಸಲಿಟ್ಟಿದ್ದೇನೆ. ರೈತರ ಕಲ್ಯಾಣಕ್ಕಾಗಿ ನಮ್ಮ ಸರ್ಕಾರ ಹಲವು ಯೋಜನೆಗಳನ್ನು ಜಾರಿ ಮಾಡಿದೆ. ಪ್ರಧಾನಿ ಮೋದಿ ಅವರು ದೇಶದಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತಂದಿದ್ದಾರೆ ಎಂದರು.
ಬಿಜೆಪಿ ಸರ್ಕಾರದ ಬಗ್ಗೆ ಹಗುರವಾಗಿ ಮಾತನಾಡುವುದು ಬೇಡ, ವಿಪಕ್ಷಗಳಿಗೆ ಸದನದಲ್ಲೇ ಸರಿಯಾದ ಉತ್ತರ ಕೊಡುತ್ತೇವೆ ಎಂದು ಅವರು ಹೇಳಿದರು.

 

 

[t4b-ticker]

You May Also Like

More From Author

+ There are no comments

Add yours