ಐದು ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕ ಟಿ.ರಘುಮೂರ್ತಿ ಚಾಲನೆ

 

 

 

 

ಚಳ್ಳಕೆರೆ: ಚಳ್ಳಕೆರೆ ತಾಲೂಕಿನ  ಪಿ ಮಹದೇವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗಪ್ಪನಹಳ್ಳಿ ಗೇಟ್ ನಿಂದ  ಆಂಧ್ರ ಗಡಿಯವರೆಗೆ 5 ಕೋಟಿ ರೂಪಾಯಿ ವೆಚ್ಚದ ಮುಖ್ಯರಸ್ತೆ  ಡಾಂಬೀಕರಣ ಕಾಮಗಾರಿಗೆ ಶಾಸಕ ಟಿ.ರಘುಮೂರ್ತಿ ಅವರು  ಭೂಮಿಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು.

 

 

ಈ ಸಂದರ್ಭದಲ್ಲಿ ಮಾತನಾಡಿ ಸುಮಾರು ಐದು ಕೋಟಿ ವೆಚ್ಚದಲ್ಲಿ ಉತ್ತಮ ರಸ್ತೆ ನಿರ್ಮಾಣ ಮಾಡಲು ತಿಳಿಸಿದ್ದೇನೆ.ಗುಣಮಟ್ಟದ ಕಾಮಗಾರಿ ಮಾಡಬೇಕು. ಮಳೆಯ ವಾತವರಣ ನೋಡಿಕೊಂಡು ಉತ್ತಮ ರಸ್ತೆ ನಿರ್ಮಾಣ ಮಾಡಲು ಅಧಿಕಾರಿಗಳಿಗೆ ತಾಖೀತು ಮಾಡಿದರು.

ಈ ಸಂದರ್ಭದಲ್ಲಿ  ಗ್ರಾಮ ಪಂಚಾಯತಿ ಅಧ್ಯಕ್ಷರಾದ ತ್ಯಾಗರಾಜ್ ಉಪಾಧ್ಯಕ್ಷರಾದ ಶ್ರೀಮತಿ ರತ್ನಮ್ಮ ಗ್ರಾಮ ಪಂಚಾಯಿತಿ ಸದಸ್ಯರು ತಾಲೂಕು ದಂಡಾಧಿಕಾರಿಗಳಾದ ಎನ್ ರಘುಮೂರ್ತಿ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಗಳಾದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಈಶ್ವರ , ರೈತ ಮುಖಂಡರಾದ ಸೋಮಗುದ್ದು ರಂಗಸ್ವಾಮಿ , ಮುಖಂಡರು ಮತ್ತು ಸಾರ್ವಜನಿಕರು ಹಾಜರಿದ್ದರು.

[t4b-ticker]

You May Also Like

More From Author

+ There are no comments

Add yours