ವಿದ್ಯಾಸಿರಿ ಯೋಜನೆ ಅರ್ಜಿ ಆಹ್ವಾನ

 

 

 

 

ಚಿತ್ರದುರ್ಗ :(ಕರ್ನಾಟಕ ವಾರ್ತೆ)ಸೆಪ್ಟಂಬರ್ 20:
2022-23ನೇ ಸಾಲಿನ   ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ (ಮುಸ್ಲಿಂ, ಕ್ರಿಶ್ಚಿಯನ್, ಜೈನ್,  ಬೌದ್ಧ, ಸಿಖ್ ಮತ್ತು ಪಾರ್ಸಿ) ವಿದ್ಯಾಸಿರಿ ಯೋಜನೆಯಡಿ ಸೇವಾಸಿಂಧು ಪೋರ್ಟಲ್ https:sevasindhu.karnataka.gov.in ಮೂಲಕ ಅರ್ಜಿ ಆಹ್ವಾನಿಸಿದೆ. ಅಕ್ಟೋಬರ್ 20 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಅರ್ಹತೆಗಳು : ವಿದ್ಯಾರ್ಥಿಯು ಕರ್ನಾಟಕ ರಾಜ್ಯ ನಿವಾಸಿಯಾಗಿರಬೇಕು. ವಿದ್ಯಾರ್ಥಿಯು ಕುಟುಂಬದ ವಾರ್ಷಿಕ ವರಮಾನ ರೂ.2.00 ಲಕ್ಷಗಳ ಮಿತಿಯಲ್ಲಿರಬೇಕು. ಪ್ರವರ್ಗ-1ರಲ್ಲಿ ಬರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳ ವಾರ್ಷಿಕ ವರಮಾನ ರೂ.2.50 ಲಕ್ಷಗಳ ಮಿತಿಯಲ್ಲಿರಬೇಕು. ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದವರಾಗಿದ್ದು, ಅವರು ಓದುತ್ತಿರುವ ಕಾಲೇಜು ಕನಿಷ್ಠ 5 ಕಿ.ಮೀ ಗಳ ದೂರ ಇರಬೇಕು. ಆದರೆ ವಿದ್ಯಾರ್ಥಿಯ ಸ್ವಂತ ಸ್ಥಳ, ನಗರ ಪಟ್ಟಣ ಆಗಿದ್ದು, ಅವರು ಬೇರೆ ನಗರ, ಪಟ್ಟಣದಲ್ಲಿರುವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿದ್ದಲ್ಲಿ ಅಂತಹವರು ಈ ಸೌಲಭ್ಯಕ್ಕೆ ಅರ್ಹರಿರುತ್ತಾರೆ. ಕಲೆ, ವಿಜ್ಞಾನ ಹಾಗೂ ವಾಣಿಜ್ಯ ಕೋರ್ಸುಗಳ, ಪದವಿ ಅಥವಾ ಸ್ನಾತಕೋತ್ತರ ಪದವಿಗಳಲ್ಲಿ ಉತ್ತೀರ್ಣ ಅನುತ್ತೀರ್ಣರಾದವರು ಅಂಗೀಕೃತ ವೃತ್ತಿಪರ, ಅಥವಾ ತಾಂತ್ರಿಕ ಸರ್ಟಿಫಿಕೆಟ್, ಡಿಪ್ಲೋಮಾ ಪದವಿ ಕೋರ್ಸುಗಳಲ್ಲಿ ವ್ಯಾಸಂಗ ಮಾಡಿದ್ದಲ್ಲಿ, ಹಾಗೂ ಇತರೆ ರೀತಿ ಅರ್ಹರಿದ್ದಲ್ಲಿ ಅವರು ಈ ಯೋಜನೆಯಡಿ ಸೌಲಭ್ಯಗಳಿಗೆ ಅರ್ಹರಿರುತ್ತಾರೆ. ಒಂದಕ್ಕಿಂತ ಹೆಚ್ಚು ಭಾರಿ ಕೋರ್ಸುಗಳ ಬದಲಾವಣೆ ಮಾಡಿಕೊಂಡವರು ಅರ್ಹರಿರುವುದಿಲ್ಲ. 2022-23ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿನಿಲಯದಲ್ಲಿ ಪ್ರವೇಶಕ್ಕಾಗಿ ಅರ್ಜಿಗಳನ್ನು ಸಲ್ಲಿಸಿ ಸ್ಥಳಾವಕಾಶವಿಲ್ಲದೇ ಇರುವ ಅರ್ಜಿಗಳಿಗೆ ಮಾತ್ರ ವಿದ್ಯಾಸಿರಿ ಯೋಜನೆಯಡಿ ಸಹಾಯಧನ ಮಂಜೂರು ಮಾಡಲಾಗುವುದು. ಸ್ವೀಕೃತವಾದ ಅರ್ಹ ಅರ್ಜಿಗಳನ್ನು ಹಿಂದಿನ ವರ್ಷದ ವಾರ್ಷಿಕ, ಸೆಮಿಸ್ಟರ್ ತರಗತಿಯಲ್ಲಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಇಳಿಕೆ ಕ್ರಮಾನುಸಾರ ವಿದ್ಯಾರ್ಥಿಗಳು ವ್ಯಾಸಂಗಮಾಡುತ್ತಿರುವ ಕೋರ್ಸ್‍ಗಳ ಆಧಾರದ ಮೇಲೆ ಪಟ್ಟಿಯನ್ನು ಸಿದ್ದಪಡಿಸಲಾಗುತ್ತದೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಮಾಸಿಕ ರೂ 1500/-ಗಳಂತೆ 10 ತಿಂಗಳಿಗೆ ಗರಿಷ್ಟ 15000/-ಗಳನ್ನು ಅವರ ವಿದ್ಯಾಭ್ಯಾಸ ಅವಧಿಗೆ ಮಾತ್ರ ನೀಡಲಾಗುವುದು.
ಅರ್ಜಿ ಸಲ್ಲಿಸಿದ ಮೂಲಪ್ರತಿಯನ್ನು ಅಗತ್ಯ ದಾಖಲಾತಿಗಳೊಂದಿಗೆ, ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಶ್ರೀರಾಮ ಕಾಂಪ್ಲೆಕ್ಸ್, ಸ್ಟೇಡಿಯಂ ರಸ್ತೆ, ಆಂಜನೇಯ ದೇವಸ್ಥಾನ ಎದುರು, ಚಿತ್ರದುರ್ಗ ಹಾಗೂ ಜಿಲ್ಲೆಯ ಎಲ್ಲಾ ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿಗೆ ಅಗತ್ಯ ದಾಖಲಾತಿಗಳೊಂದಿಗೆ ಸಂಬಂಧಪಟ್ಟ ಪ್ರಾಂಶುಪಾಲರಿಂದ ದೃಢೀಕರಿಸಿ ಸಲ್ಲಿಸಬೇಕು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
[t4b-ticker]

You May Also Like

More From Author

+ There are no comments

Add yours