ಚಿತ್ರದುರ್ಗ(ಕರ್ನಾಟಕ ವಾರ್ತೆ)ಸೆಪ್ಟೆಂಬರ್20:
ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಇದೇ ಸೆಪ್ಟೆಂಬರ್ 23 ರಂದು ಬೆಳಗ್ಗೆ 10 ಗಂಟೆಗೆ ್ಲ ನೇರ ನೇಮಕಾತಿ ಸಂದರ್ಶನ ಹಮ್ಮಿಕೊಳ್ಳಲಾಗಿದೆ.
ಸಂದರ್ಶನದಲ್ಲಿ ಪ್ರತಿಷ್ಠಿತ ಕಂಪನಿಯಾದ ಮುತ್ತೂಟ್ ಫೈನಾನ್ಸ್ ಪ್ರೈವೆಟ್ ಲಿಮಿಟಿಡ್ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಪುರುಷ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಾಗುವುದು.
ಎಂಬಿಎ (ಹಣಕಾಸು ಮತ್ತು ಮಾರುಕಟ್ಟೆ) ಪದವಿಯಲ್ಲಿ ಶೇ.60 ಅಧಿಕ ಅಂಕ ಪಡೆದ 28 ವರ್ಷದೊಳಗಿರುವ ಪುರುಷ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು. ನೇರ ಸಂದರ್ಶನಕ್ಕೆ ಅಗತ್ಯ ದಾಖಲೆಗಳಾದ ಬಯೋಡಾಟಾ, ವಿದ್ಯಾರ್ಹತೆ ಪ್ರಮಾಣ ಪತ್ರ, ಪೋಟೋ ತರಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಕಚೇರಿ ದೂರವಾಣಿ ಸಂಖ್ಯೆ 7022459064, 8310785143, 8105619020ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
[t4b-ticker]
+ There are no comments
Add yours