ಸಹ ಪಠ್ಯಚಟುಟಿಕೆಗಳು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮೂಡಿಸುತ್ತದೆ: ಜಿಲ್ಲಾಧ್ಯಕ್ಷ ಕೆ.ಮಂಜುನಾಥ್

 

 

 

 

ಹಿರಿಯೂರು: ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಹಿರಿಯೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಇವರ ಸಹಯೋಗದಲ್ಲಿ ದಿನಾಂಕ 21-09-2022ರಂದು ಹಿರಿಯೂರು ತಾಲ್ಲೂಕು *ಧರ್ಮಪುರ* ಹೋಬಳಿ ಮಟ್ಟದ ಪ್ರೌಢಶಾಲೆಗಳ ಪ್ರತಿಭಾ ಕಾರಂಜಿ ಮತ್ತು ಸಾಂಸ್ಕೃತಿಕ ಉತ್ಸವ-2022

ಎರಡು ವರ್ಷಗಳ ಕೋವಿಡ್  ಮಹಾಮಾರಿಯ ಅಟ್ಟಹಾಸದ ನಂತರ ಶಿಕ್ಷಣ ಇಲಾಖೆಯ ಇಂತಹ ಪ್ರಮುಖ ಪಠ್ಯೇತರ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಶಿಕ್ಷಕರಲ್ಲಿ ಮತ್ತು ಮಕ್ಕಳಲ್ಲಿ ಹೊಸ ಚೈತನ್ಯ, ಹೊಸ ಹುರುಪು, ಹೊಸ ಆಶಯ, ಹೊಸ ಹುಮ್ಮಸ್ಸು, ಮೂಡಿಸಿ ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಲು ಉತ್ತಮ ವೇದಿಕೆಯಾಗಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಶ್ರೀಲತಾ ಶಿವಕುಮಾರ್ ವಹಿಸಿ ಕೊಂಡಿದ್ದರು.

ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆಯ ಅಧ್ಯಕ್ಷರು ಹಾಗೂ ಹರಿಯಬ್ಬೆ ಪ್ರೌಢಶಾಲೆಯ ಪ್ರಭಾರಿ ಪ್ರಾಂಶುಪಾಲರಾದ ಆರ್ ಶಿವಕುಮಾರ್ ಸರ್ವರನ್ನು ಸ್ವಾಗತಿಸಿದರು.

 

 

ಹಿರಿಯೂರು ಕ್ಷೇತ್ರ ಸಮನ್ವಯಾಧಿಕಾರಿಗಳಾದ ತಿಪ್ಪೇರುದ್ರಪ್ಪ ನವರು ಪ್ರಾಸ್ತಾವಿಕವಾಗಿ ಮಾತನಾಡಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲಿರುವ ಕಲಾಪ್ರತಿಭೆಯನ್ನು ಗುರುತಿಸಿ ಪೋಷಿಸುವ ವೇದಿಕೆ ಇದಾಗಿದೆ. ಇದನ್ನು ಸ್ಪೂರ್ತಿಯಿಗಿ ಬೆಳೆಸಲು ಎಲ್ಲರೂ ಶ್ರಮಿಸಬೇಕಾಗಿದೆ ಹೇಳಿದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆಯ ಅಧ್ಯಕ್ಷರಾದ  ಕೆ ಮಂಜುನಾಥ್ ಅವರು ನಡೆಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಗ್ರಾಮೀಣ ಭಾಗದಲ್ಲಿ ಇಂತಹ ಕಾರ್ಯಕ್ರಮಗಳು ಆಯೋಜನೆ ಆಗುವುದರಿಂದ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಸ್ಪರ್ಧಾತ್ಮಕ ಯುಗದಲ್ಲಿ ಪೈಪೋಟಿ ನೀಡುವ ಆತ್ಮಸ್ಥೈರ್ಯ, ಸಮಸ್ಯೆಗಳು ಎದುರಾದಾಗ ಅವುಗಳನ್ನು ಕ್ರೀಡಾ ಮನೋಭಾವದಿಂದ ಎದುರಿಸುವ ಧೈರ್ಯ ಮಕ್ಕಳಲ್ಲಿ ಮೂಡುತ್ತದೆ. ಇಂತಹ ಕಾರ್ಯಕ್ರಮಗಳಿಗೆ ಮಕ್ಕಳನ್ನು ಉರಿದುಂಬಿಸಿ ಪ್ರೋತ್ಸಾಹಿಸಿ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸುವಂತೆ ಪ್ರೇರೇಪಿಸಿ ಇಲ್ಲಿಗೆ ಕರೆತಂದಿರುವ ಎಲ್ಲಾ ಶಿಕ್ಷಕರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.

ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಪಾರಿತೋಷಕಗಳನ್ನು ಹರಿಯಬ್ಬೆಯ ಕಾಂತರಾಜ್ ಎಸ್ PSI ಪರುಶುರಾಂಪುರ ಠಾಣೆ ಇವರು ನೀಡಿರುತ್ತಾರೆ.

ಕಾರ್ಯಕ್ರಮದಲ್ಲಿ *ಬಿ.ಎಚ್.ವೆಂಕಟೇಶ್* ಮಾಜಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷರು, ಮಾಜಿ ಅಧ್ಯಕ್ಷರು ರೈತ ಸೇವಾ ಸಹಕಾರ ಸಂಘ, ಮಾಜಿ ಸದಸ್ಯರು ಭೂ ನ್ಯಾಯ ಮಂಡಳಿ ಹಿರಿಯೂರು ತಾಲ್ಲೂಕುರವರು,
ಎಸ್ ಡಿ ಎಂ ಸಿ ಅಧ್ಯಕ್ಷರಾದ ಮಹೇಶ್ ಹಾಗೂ ಸದಸ್ಯರು, ECO ಗಳಾದ ಲೋಹಿತ್, ಶಶಿಧರ್, ಹರೀಶ್ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಜಿಲ್ಲಾ ಸಂಘದ ಕಾರ್ಯದರ್ಶಿಗಳಾದ ಶ್ರೀ ಮಂಜುನಾಥ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀ ವೆಂಕಟೇಶ್, ಅಕ್ಷರ ದಾಸೋಹ ಅಧಿಕಾರಿ ಶ್ರೀ ಮಹೇಶ್ವರ ರೆಡ್ಡಿ, ಹಾಲಿ ಹಾಗೂ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಜಿ.ಪರಮೇಶ್ವರ ಮತ್ತು ಸದಸ್ಯರು,
ಹರಿಯಬ್ಬೆ ಹೋಬಳಿ ವ್ಯಾಪ್ತಿಯಲ್ಲಿ ಬರುವ ಪ್ರೌಢಶಾಲಾ ಶಿಕ್ಷಕರು ಮತ್ತು ಶಿಕ್ಷಕಿಯರು, ಹರಿಯಬ್ಬೆ ಪ್ರೌಢಶಾಲೆಯ ಸಿಬ್ಬಂದಿ ವರ್ಗದವರು, ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಿರುವ ಎಲ್ಲಾ ವಿದ್ಯಾರ್ಥಿ ವಿದ್ಯಾರ್ಥಿಗಳು ಹಾಗೂ ಪೋಷಕರು, ತೀರ್ಪುಗಾರರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

[t4b-ticker]

You May Also Like

More From Author

+ There are no comments

Add yours