ಜೀವನದ ನಡವಳಿಕೆಗಳು ಕಾನೂನಿನಲ್ಲಿ ಅಡಕವಾಗಿದೆ: ನ್ಯಾಯಾಧೀಶ ವಿಜಯೇಂದ್ರ ಟಿ.ಎಸ್.
ವೇಣೂರು: ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ, ವಕೀಲರ ಸಂಘ (ರಿ.), ಯುವವಾಹಿನಿ (ರಿ.) ವೇಣೂರು ಘಟಕ ಹಾಗೂ ಸ.ಪ.ಪೂ. ಕಾಲೇಜು ವೇಣೂರು ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮವು ವೇಣೂರು ಸ.ಪ.ಪೂ. ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಬೆಳ್ತಂಗಡಿ ಜೆಎಂಎಫ್ಸಿ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾಗಿರುವ ವಿಜಯೇಂದ್ರ ಟಿ.ಎಸ್. ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾನವ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಿದರು. ಜೀವನದ ನಡವಳಿಕೆಗಳು ಕಾನೂನಿನಲ್ಲಿ ಅಡಕವಾಗಿದೆ. ಚಿಕ್ಕ ವಯಸ್ಸಿನಿಂದಲೇ ಸಾಮಾನ್ಯ ಕಾನೂನಿನ ಉತ್ಸುಕತೆಯಿಂದ ತಿಳಿದುಕೊಳ್ಳಬೇಕು ಎಂದರು.
ವೇಣೂರು ಯುವವಾಹಿನಿ ಘಟಕದ ಅಧ್ಯಕ್ಷ ಪ್ರಕಾಶ್ ಕೋಟ್ಯಾನ್ ನಾರಾವಿ ಅಧ್ಯಕ್ಷತೆ ವಹಿಸಿದ್ದರು. ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಎಸ್. ಲೋಬೋ ಅವರು ಪೋಕ್ಸೋ ಕಾಯ್ದೆ ಬಗ್ಗೆ ಮಾಹಿತಿ ನೀಡಿದರು. ವೇಣೂರು ಪೊಲೀಸ್ ಉಪ ನಿರೀಕ್ಷಕ ಅಕ್ಷಯ್ ಡಿ. ಅವರು ಸೈಬರ್ ಕ್ರೈಂ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸಿದರು, ವಕೀಲರ ಸಂಘದ ಕಾರ್ಯದರ್ಶಿ ಪ್ರಶಾಂತ್ ಎಂ., ಕಾಲೇಜಿನ ಪ್ರಾಚಾರ್ಯ ಗಂಗಾಧರ ಉಪಸ್ಥಿತರಿದ್ದರು.
ಕಾರ್ಯಕ್ರಮದ ಉಸ್ತುವಾರಿಯನ್ನು ಘಟಕದ ಮಾಜಿ ಅಧ್ಯಕ್ಷರಾದ ಯೋಗೀಶ್ ಬಿಕ್ರೋಟ್ಟು ಮತ್ತು ಉಪಾಧ್ಯಕ್ಷರಾದ ಸತೀಶ್ ವಹಿಸಿದ್ದರು. ಘಟಕದ ಸ್ಥಾಪಕ ಅಧ್ಯಕ್ಷರಾದ ನಿತೀಶ್ ಹೆಚ್ ಕೋಟ್ಯಾನ್ ಸ್ವಾಗತಿಸಿದರು. ಕಾಲೇಜಿನ ವಿದ್ಯಾರ್ಥಿನಿ ಕು. ಶರಣ್ಯ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಉಪನ್ಯಾಸಕ ವೆಂಕಟೇಶ್ ಪಿ. ವಂದಿಸಿದರು.
ಉಪಹಾರದ ವ್ಯವಸ್ಥೆಯನ್ನು ಘಟಕದ ಮಾಜಿ ಅಧ್ಯಕ್ಷರಾದ ನವೀನ್ ಪೂಜಾರಿ ಪಚ್ಚೇರಿ ನೀಡಿ ಸಹಕರಿಸಿದರು. ಕಾರ್ಯಕ್ರಮದಲ್ಲಿ ಘಟಕದ ಪದಾಧಿಕಾರಿಗಳು, ಮಾಜಿ ಅಧ್ಯಕ್ಷರು, ಸದಸ್ಯರು, ಸಲಹೆಗಾರರು, ಕಾಲೇಜಿನ ಅಧ್ಯಾಪಕ ವೃಂದ, ವಿದ್ಯಾರ್ಥಿಗಳು ಭಾಗವಹಿಸಿದ್ದರು.





