ಚಿತ್ರದುರ್ಗ (ಕರ್ನಾಟಕ ವಾರ್ತೆ) ಸೆಪ್ಟಂಬರ್ 24:
2022-23ನೇ ಸಾಲಿನ ಅಕ್ಟೋಬರ್ 09ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಚಿತ್ರದುರ್ಗ ಜಿಲ್ಲಾ ಕೇಂದ್ರದಲ್ಲಿ ಆಚರಿಸಬೇಕಾಗಿರುತ್ತದೆ. ವಾಲ್ಮಿಕಿ ಜಯಂತಿಯನ್ನು ಯಶಸ್ವಿಯಾಗಿ ಆಚರಿಸುವ ಸಂಬಂಧ ಪೂರ್ವಸಿದ್ಧತೆ ಮಾಡಿಕೊಳ್ಳಲು ಇದೇ ಸೆಪ್ಟೆಂಬರ್ 27ರಂದು ಮದ್ಯಾಹ್ನ 3ಕ್ಕೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಸಭೆಯ ಅಧ್ಯಕ್ಷತೆ ವಹಿಸುವರು. ಸಭೆಗೆ ಜಿಲ್ಲಾಮಟ್ಟದ ಎಲ್ಲಾ ಇಲಾಖಾ ಅಧಿಕಾರಿಗಳು, ಸಮಾಜ ಮುಖಂಡರು ಸಭೆಗೆ ತಪ್ಪದೇ ಆಗಮಿಸಿ ಸಲಹೆ ಸೂಚನೆ ನೀಡಲು ಭಾಗವಹಿಸಬೇಕು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.
[t4b-ticker]
+ There are no comments
Add yours