ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ

 

 

 

 

ಚಿತ್ರದುರ್ಗ (ಕರ್ನಾಟಕ ವಾರ್ತೆ) ಸೆಪ್ಟಂಬರ್ 29:
2022ರಲ್ಲಿ ನಡೆದ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿಯ ವಾರ್ಷಿಕ ಪರೀಕ್ಷೆಗಳಲ್ಲಿ ಶೇಕಡ 90 ಮತ್ತು ಅದಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿರುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ‘ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರ’ಕ್ಕಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 21 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‍ಸೈಟ್ https://bcwd.karnataka.gov.in   ಹಾಗೂ ಸಹಾಯವಾಣಿ 8050770004ಗೆ ಸಂಪರ್ಕಿಸಬಹದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

 

 

[t4b-ticker]

You May Also Like

More From Author

+ There are no comments

Add yours