49 ಮಂದಿ ವಿಕಲಚೇತನರಿಗೆ ಸಾಧನ ಸಲಕರಣೆಗಳ ವಿತರಣೆ

 

 

 

 

ಚಿತ್ರದುರ್ಗ(ಕನಾಟಕ ವಾರ್ತೆ)ಸೆಪ್ಟೆಂಬರ್30:
ವಿಕಲಚೇತನರಿಗೆ ವಿವಿಧ ಸಾಧನ ಸಲಕರಣೆಗಳನ್ನು ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿ ಹಾಗೂ ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್ ವಿತರಿಸಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಜಿಲ್ಲೆಯ ಚಿತ್ರದುರ್ಗ ತಾಲ್ಲೂಕು, ಚಳ್ಳಕೆರೆ ಹಾಗೂ ಹಿರಿಯೂರು ತಾಲ್ಲೂಕಿನ  ಒಟ್ಟು 49 ಮಂದಿ ವಿಕಲಚೇತನರಿಗೆ ಸಾಧನ ಸಲಕರಣೆ ವಿತರಿಸಲಾಯಿತು.
19 ಗಾಲಿಕುರ್ಚಿ, 6 ಶ್ರವಣ ಸಾಧನ, 9 ಸಾದಾ ಕೈ ಚಾಲಿತ ಸೈಕಲ್, 10 ಬಾಟರ್ ಬೆಡ್ ಹಾಗೂ 2 ಊರುಗೋಲು ಸೇರಿದಂತೆ ವಿಕಲಚೇತನರಿಗೆ ವಿವಿಧ ಸಾಧನ ಸಲಕರಣೆಗಳ ವಿತರಣೆ ಮಾಡಲಾಯಿತು.
ಈ ವೇಳೆ ಮಾತನಾಡಿದ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ, ಮುಂದಿನ ವರ್ಷ ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿಯ ಅನುದಾನ ಬಳಸಿ ಚಿತ್ರದುರ್ಗ ತಾಲ್ಲೂಕಿನ ಎಲ್ಲ ಅರ್ಹ ವಿಕಲಚೇತನರಿಗೆ ಸಾಧನ ಸಲಕರಣೆಗಳ ವಿತರಣೆಗೆ ಕ್ರಮವಹಿಸಲಾಗುವುದು ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್ ಮಾತನಾಡಿ, ಪ್ರಧಾನಮಂತ್ರಿಗಳ ಸೇವಾ ಪಾಕ್ಷಿಕದ ಅಂಗವಾಗಿ ವಿಕಲಚೇತನರಿಗೆ ಸೆಪ್ಟೆಂಬರ್ 15 ರಿಂದ ಅಕ್ಟೋಬರ್ 2 ರವೆರೆಗೆ ವಿಕಲಚೇತನರಿಗೆ ಸಾಧನ ಸಲಕರಣೆ ವಿತರಣೆ ಮಾಡಲಾಗುತ್ತಿದೆ. ವಿಕಲಚೇತನರ ಬದುಕನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಸರ್ಕಾರ ವಿವಿಧ ಸೌಲಭ್ಯಗಳನ್ನು ನೀಡುತ್ತಿದೆ. ಈ ಸೌಲಭ್ಯಗಳನ್ನು ಸದ್ಭಳಕೆ ಮಾಡಿಕೊಂಡು ಉತ್ತಮ ಬದುಕು ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ, ಶಿಕ್ಷಣ ಇಲಾಖೆಯ ಜಿಲ್ಲಾ ಸಮನ್ವಯ ಸಂಪನ್ಮೂಲ ವ್ಯಕ್ತಿ ರಾಜು ಸೇರಿದಂತೆ ವಿಕಲಚೇತನ ಫಲಾನುಭವಿಗಳು ಇದ್ದರು.

 

 

[t4b-ticker]

You May Also Like

More From Author

+ There are no comments

Add yours