ಎಸ್ಸಿ 17 ಮತ್ತು ಎಸ್ಟಿ 7.5 ಮೀಸಲಾತಿ ಹೆಚ್ಚಳಕ್ಕೆ ಒಮ್ಮತದ ನಿರ್ಧಾರ : ಸಿಎಂ ಬಸವರಾಜ್ ಬೊಮ್ಮಾಯಿ

 

 

 

 

ಬೆಂಗಳೂರು, ಅಕ್ಟೋಬರ್ 07; “ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೀಸಲಾತಿ ವಿಚಾರದಲ್ಲಿ ಶನಿವಾರ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಸಿಎಂ  ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಹೆಚ್ಚಿಸಲು ರಚಿಸಿರುವ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿ ನೀಡಿರುವ ವರದಿ ಕುರಿತು ಚರ್ಚಿಸಲು ಶುಕ್ರವಾರ ಸರ್ವಪಕ್ಷಗಳ ಸಭೆ ನಡೆಯಿತು.

 

ಸಿಎಂ  ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಭಾಗವಹಿಸಿದ್ದರು.

 

 

 

ಸಭೆಯ ಬಳಿಕ ಮಾತನಾಡಿದ ಮುಖ್ಯಮಂತ್ರಿಗಳು, “ನ್ಯಾಯಮೂರ್ತಿ ಎಚ್. ಎನ್. ನಾಗಮೋಹನದಾಸ್ ಆಯೋಗದ ಶಿಫಾರಸಿನಂತೆ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇ 15 ರಿಂದ 17ಕ್ಕೆ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ 3 ರಿಂದ 7ಕ್ಕೆ ಹೆಚ್ಚಿಸಲು ಸಭೆಯಲ್ಲಿ ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ” ಎಂದರು.

ನಾಗಮೋಹನದಾಸ್‌ ಆಯೋಗ ಹಾಗೂ ನ್ಯಾಯಮೂರ್ತಿ ಸುಭಾಷ್ ಅಡಿ ನೇತೃತ್ವದ ಸಮಿತಿಗಳ ಶಿಫಾರಸುಗಳನ್ನು ಒಪ್ಪಿಕೊಳ್ಳಲಾಗಿದೆ” ಎಂದು ಮುಖ್ಯಮಂತ್ರಿಗಳು ಹೇಳಿದರು.

“ಶನಿವಾರ ನಡೆಯುವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಗುತ್ತದೆ. ಸಂಪುಟ ವರದಿಯನ್ನು ಒಪ್ಪಿಕೊಂಡು ಡಿಸೆಂಬರ್ ಅಧಿವೇಶನದಲ್ಲಿ ಮಂಡಿಸಲಾಗುವುದು ಅಲ್ಲಿ ಒಮ್ಮತದ ನಿರ್ಣಯ ಕೈಗೊಳ್ಳಲಾಗುತ್ತದೆ” ಎಂದು ತಿಳಿಸಿದರು.

“ಮೀಸಲಾತಿ ಪ್ರಮಾಣ ಶೇ 60ರಷ್ಟು ಮೀರಬಾರದು ಎಂದು ಸುಪ್ರೀಂಕೋರ್ಟ್ ಹೇಳಿದೆ. ಸಂವಿಧಾನದ ಪರಿಚ್ಛೇಧ 9ರ ವ್ಯಾಪ್ತಿಗೆ ಕರ್ನಾಟಕದ ಮೀಸಲಾತಿ ವಿಷಯವನ್ನು ಸೇರಿಸಿದರೆ ನ್ಯಾಯಾಲಯದ ಪರಿಶೀಲನೆ ವ್ಯಾಪ್ತಿಯಿಂದ ಹೊರಗಿಡಲು ಸಾಧ್ಯ. ಅದಕ್ಕೆ ಪೂರಕವಾಗಿ ಕ್ರಮ ಕೈಗೊಳ್ಳಲಾಗುತ್ತದೆ” ಎಂದರು.

ಮೀಸಲಾತಿ ಕಡಿತವಿಲ್ಲ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, “ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳದಿಂದ ಇತರ ಯಾವುದೇ ಸಮುದಾಯಗಳ ಮೀಸಲಾತಿ ಕಡಿತವಾಗುವುದಿಲ್ಲ. ಎಲ್ಲಾ ಸಮುದಾಯಗಳ ಮೀಸಲಾತಿ ಪ್ರಮಾಣ ಈಗಿನಂತೆ ಮುಂದುವರೆಯಲಿದೆ. ಎಸ್‌ಸಿ, ಎಸ್‌ಟಿ ಸಮುದಾಯಗಳ ಮೀಸಲಾತಿ ಪ್ರಮಾಣ ಮಾತ್ರ ಹೆಚ್ಚಳವಾಗಲಿದೆ” ಎಂದು ಸ್ಪಷ್ಟಪಡಿಸಿದರು.

ಸರ್ವಪಕ್ಷಗಳ ಸಭೆಯ ಬಳಿಕ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿ, ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಸಿಗಬೇಕೆಂಬ ನಿಲುವಿಗೆ ನಾನು ಈಗಲೂ ಬದ್ಧ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಇಂದಿನ ವಿಧಾನಮಂಡಲದ ಉಭಯ ಸದನಗಳ ನಾಯಕರ ಸಭೆಯಲ್ಲಿ  ಇದೇ  ಅಭಿಪ್ರಾಯ ವ್ಯಕ್ತಪಡಿಸಿದ್ದೇನೆ ಎಂದು ತಿಳಿಸಿದರು‌ .

[t4b-ticker]

You May Also Like

More From Author

+ There are no comments

Add yours