ಎಸ್ಟಿ‌ ಮೀಸಲಾತಿ ಹೆಚ್ಚಳ ಆದೇಶದ ಪ್ರತಿ ತಲುಪಿದ ನಂತರ ಹೋರಾಟ ಹಿಂಪಡೆಯಲಾಗುವುದು: ವಾಲ್ಮೀಕಿ ಶ್ರೀ

 

 

 

 

ಬೆಂಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳ ಮಾಡಲು ಸರ್ಕಾರ ನಿರ್ಧಾರ ಕೈಗೊಂಡಿರುವುದು ಸ್ವಾಗತಾರ್ಹ ಎಂದು ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮೀಜಿ ಹೇಳಿದ್ದಾರೆ.

ಕಳೆದ 240 ದಿನಗಳಿಂದ ಮೀಸಲಾತಿ ಹೆಚ್ಚಳಕ್ಕೆ ಹೋರಾಟ ನಡೆಸುತ್ತಿರುವ ಸ್ವಾಮೀಜಿ ಮಾತನಾಡಿ, ಎಸ್ಟಿ ಮೀಸಲಾತಿಯನ್ನು ಶೇಕಡ ಮೂರರಿಂದ ಶೇಕಡ 7 ರಷ್ಟು ಹೆಚ್ಚಳ ಮಾಡುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ.

 

 

ನಾಳೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯುವುದಾಗಿ ತಿಳಿಸಿದ್ದಾರೆ. ಆದೇಶದ ಪ್ರತಿ ತಲುಪಿದ ನಂತರ ಹೋರಾಟ ಹಿಂಪಡೆಯಲಾಗುವುದು ಎಂದು ಹೇಳಿದ್ದಾರೆ.

ಜನಗಣತಿಗೆ ಅನುಗುಣವಾಗಿ ಮೀಸಲಾತಿ ಹೆಚ್ಚಿಸಬೇಕು. ನ್ಯಾ. ನಾಗಮೋಹನದಾಸ್ ವರದಿ ಅನುಷ್ಠಾನಕ್ಕೆ ಒತ್ತಾಯಿಸಿ ಹೋರಾಟ ನಡೆಸಲಾಗಿತ್ತು. ಈ ಬಗ್ಗೆ ಸಿಎಂ ಭರವಸೆ ನೀಡಿದ್ದು, ನಾಳೆ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತ ನಂತರ ಧರಣಿ ಹಿಂಪಡೆಯುತ್ತೇವೆ ಎಂದು ಹೇಳಿದ್ದಾರೆ.

[t4b-ticker]

You May Also Like

More From Author

+ There are no comments

Add yours