ಮೈಸೂರು, ಡಿ. 11: ಮೈಸೂರು ಅರಮನೆಯ ಮುಖ್ಯದ್ವಾರದ ಮೇಲ್ಚಾವಣಿಯ ಒಂದು ಭಾಗ ಕುಸಿತವಾಗಿದ್ದು, ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದೆ. ಅರಮನೆಯ ವರಾಹ ಗೇಟ್ ಮುಖ್ಯದ್ವಾರದ ಮೇಲ್ಚಾವಣಿಯ ಒಂದು ಭಾಗ ಸ್ವಲ್ಪ ಪ್ರಮಾಣದಲ್ಲಿ ಕುಸಿದುಬಿದ್ದಿದೆ. ಸಿಬ್ಬಂದಿ ನಿಲ್ಲಿಸಿದ್ದ ಬೈಕ್ ಮೇಲೆಯೇ ಬಿದ್ದಿದೆ. ಜನರು ಇಲ್ಲದ ವೇಳೆ ಕುಸಿದಿದ್ದರಿಂದ ಅನಾಹುತ ತಪ್ಪಿದೆ. ಘಟನೆ ಬಳಿಕ ಗೇಟ್ ಬಳಿ ಸಿಬ್ಬಂದಿ ಬ್ಯಾರಿಕೇಡ್ ಅಳವಡಿಸಿದ್ದಾರೆ.





