ಅ.14ರಂದು ರಾಜ್ಯ ಮಟ್ಟದ ಹೊನಲು ಬೆಳಕಿನ ಹ್ಯಾಂಡ್‍ಬಾಲ್ ಪಂದ್ಯಾವಳಿ

 

 

 

 

ಚಿತ್ರದುರ್ಗ( chitrdaurga) (ಕರ್ನಾಟಕ ವಾರ್ತೆ) ಅಕ್ಟೋಬರ್ 12:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಹ್ಯಾಂಡ್‍ಬಾಲ್ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ 14 ಮತ್ತು 17 ವರ್ಷದೊಳಗಿನ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ, ಬಾಲಕಿಯರ ಬೆಂಗಳೂರು ವಿಭಾಗ ಮತ್ತು ರಾಜ್ಯ ಮಟ್ಟದ ಹೊನಲು ಬೆಳಕಿನ ಹ್ಯಾಂಡ್‍ಬಾಲ್ ಪಂದ್ಯಾವಳಿ ಉದ್ಘಾಟನಾ ಸಮಾರಂಭವನ್ನು ಇದೇ ಅಕ್ಟೋಬರ್ 14ರಂದು ಬೆಳಿಗ್ಗೆ 10.30ಕ್ಕೆ ಚಿತ್ರದುರ್ಗ ನಗರದ ಪ್ರವಾಸಿ ಮಂದಿರದ ಎದುರಿನ ಸರ್ಕಾರಿ ಹಳೇ ಮಾಧ್ಯಮಿಕ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದೆ.
ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಎ.ನಾರಾಯಣ ಸ್ವಾಮಿ ಘನ ಉಪಸ್ಥಿತಿ ವಹಿಸುವರು. ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಉದ್ಘಾಟನೆ ನೆರವೇರಿಸುವರು. ಗೌರವ ಆಹ್ವಾನಿತರಾಗಿ ಸಾರಿಗೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು, ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಅಧ್ಯಕ್ಷತೆ ವಹಿಸುವರು.( chitrdaurga)
ಮುಖ್ಯ ಅತಿಥಿಗಳಾಗಿ ಹೊಳಲ್ಕೆರೆ ಶಾಸಕರು ಹಾಗೂ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಎಂ.ಚಂದ್ರಪ್ಪ, ಶಾಸಕರಾದ ಟಿ.ರಘುಮೂರ್ತಿ, ಗೂಳಿಹಟ್ಟಿ ಡಿ.ಶೇಖರ್, ಪೂರ್ಣಿಮಾ ಕೆ.ಶ್ರೀನಿವಾಸ್, ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕರು ಹಾಗೂ ವಿಧಾನ ಪರಿಷತ್  ಸದಸ್ಯ ಡಾ.ವೈ.ಎ.ನಾರಾಯಣಸ್ವಾಮಿ, ವಿಧಾನ ಪರಿಷತ್ ಸದಸ್ಯರಾದ ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜಿ.ಟಿ.ಸುರೇಶ್, ನಗರಸಭೆ ಅಧ್ಯಕ್ಷೆ ತಿಪ್ಪಮ್ಮ, ಆರ್ಥಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪಿ.ಸಿ.ಜಾಫರ್ ಭಾಗವಹಿಸಲಿದ್ದಾರೆ.(State level light handball tournament on 14th)

 

 

ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರಿಗೆ ರಾಜ್ಯ ಪ್ರಶಸ್ತಿಗೆ ಅರ್ಜಿ
ವಿಶೇಷ ಆಹ್ವಾನಿತರಾಗಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ನಂದಿನಿದೇವಿ, ಜಿಲ್ಲಾ ರಕ್ಷಣಾಧಿಕಾರಿ ಕೆ.ಪರಶುರಾಮ್, ಪದನಿಮಿತ್ತ ಸಹ ನಿರ್ದೇಶಕರು ಹಾಗೂ ಸಿಟಿಇ(handball) ಪ್ರಾಂಶುಪಾಲರಾದ ಹೆಚ್. ಮಂಜುನಾಥ್ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.(chitrdaurga)

[t4b-ticker]

You May Also Like

More From Author

+ There are no comments

Add yours