ಚಿತ್ರದುರ್ಗ (chitrdaurga) ಅಕ್ಟೋಬರ್ 17:
ಚಿತ್ರದುರ್ಗ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಇದೇ ಅಕ್ಟೋಬರ್ 21ರಂದು ಬೆಳಿಗ್ಗೆ 10 ರಿಂದ 3 ರವರೆಗೆ ನೇರ ನೇಮಕಾತಿ ಸಂದರ್ಶನ ಹಮ್ಮಿಕೊಳ್ಳಲಾಗಿದೆ.
ಸಂದರ್ಶನದಲ್ಲಿ ವಿವಿಧ ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸಲು ಪುರುಷ, ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಹಾಗೂ ಯಾವುದೇ ಪದವಿ ಹೊಂದಿರಬೇಕು. 18 ರಿಂದ 30 ವರ್ಷದೊಳಗಿರಬೇಕು.
5 ಪ್ರತಿ ಬಯೋಡಾಟಾ, ವಿದ್ಯಾರ್ಹತೆಯ ಪ್ರಮಾಣ ಪತ್ರಗಳು, ಭಾವಚಿತ್ರ ಸೇರಿದಂತೆ ಅಗತ್ಯ ದಾಖಲೆಗಳೊಂದಿಗೆ ಹಾಜರಾಗಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಚೇರಿಯ ದೂರವಾಣಿ ಸಂಖ್ಯೆ 7022459064, 8310785143, 8105619020, 9945587060 ಗೆ ಸಂಪರ್ಕಿಸಬಹುದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
[t4b-ticker]
+ There are no comments
Add yours