7ನೇ ತರಗತಿ ವಿದ್ಯಾರ್ಥಿಗಳಿಂದ ಎನ್‍ಎಂಎಂಎಸ್ ಪರೀಕ್ಷೆಗೆ ಅರ್ಜಿ ಆಹ್ವಾನ

 

 

 

 

ಚಿತ್ರದುರ್ಗ (chitrdaurga ) ಅಕ್ಟೋಬರ್ 17:
ಪ್ರಸಕ್ತ ಸಾಲಿನ ಎನ್‍ಎಂಎಂಎಸ್ ಪರೀಕ್ಷೆಗೆ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 25 ಕೊನೆಯ ದಿನವಾಗಿದೆ.
ಜಿಲ್ಲೆಯಲ್ಲಿನ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಸ್ಥಳೀಯ ಸಂಸ್ಥೆಗಳ ಶಾಲೆಗಳಲ್ಲಿ ಪ್ರಸಕ್ತ ಸಾಲಿನಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮಾತ್ರ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
7ನೇ ತರಗತಿ ಪರೀಕ್ಷೆಯಲ್ಲಿ ಸಾಮಾನ್ಯ ವರ್ಗ, ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಶೇ.55 ರಷ್ಟು ಅಂಕಗಳು ಅಥವಾ ತತ್ಸಮಾನ ಗ್ರೇಡ್ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಶೇ.50ರಷ್ಟು ಅಂಕ ಅಥವಾ ತತ್ಸಮಾನ ಗ್ರೇಡ್ ಗಳಿಸಿರಬೇಕು. ಪೋಷಕರ ವಾರ್ಷಿಕ ಆದಾಯ ರೂ.3.50 ಲಕ್ಷದೊಳಗಿರಬೇಕು.
ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕಿನ ನೋಡಲ್ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಡಯಟ್ ಪ್ರಾಂಶುಪಾಲರಾದ ಎಸ್.ಕೆ.ಬಿ ಪ್ರಸಾದ್ ತಿಳಿಸಿದ್ದಾರೆ.

 

 

[t4b-ticker]

You May Also Like

More From Author

+ There are no comments

Add yours