ಸ್ತಬ್ಧಚಿತ್ರದ ಮೂಲಕ ಇಲಾಖೆ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಪ್ರಚುರ ಪಡಿಸಿ -ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ

 

 

 

 

ಚಿತ್ರದುರ್ಗ(ಕರ್ನಾಟಕ ವಾರ್ತೆ).ಅ.25:
ಕನ್ನಡ ರಾಜ್ಯೋತ್ಸವದ ಮೆರವಣಿಗೆಯಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಯೋಜನೆಗಳನ್ನು ಸಾರ್ವಜನಿಕರಿಗೆ ತಿಳಿಸುವ ಸದಾವಕಾಶವನ್ನು ಜಿಲ್ಲಾ ಮಟ್ಟದ ಅಧಿಕಾರಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ ಹೇಳಿದರು.
ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ಜರುಗಿದ ಕನ್ನಡ ರಾಜ್ಯೋತ್ಸವ ಮೆರವಣಿಗೆ ಸ್ತಬ್ಧಚಿತ್ರಗಳ ಉಪಸಮಿತಿ ಸಭೆಯ ಅಧ್ಯಕ್ಷತೆ ಅವರು ಮಾತನಾಡಿದರು.
2020 ಹಾಗೂ 2021 ರಲ್ಲಿ ಕೋವಿಡ್ ಮಾರ್ಗಸೂಚಿಗಳ ಅನುಸಾರ ಸರಳವಾಗಿ ಕನ್ನಡ ರಾಜ್ಯೋತ್ಸವನ್ನು ಆಚರಿಸಲಾಗಿತ್ತು. ಸದ್ಯ 2019 ರ ಮಾದರಿಯಲ್ಲಿ ಜಿಲ್ಲಾಡಳಿತದ ವತಿಯಿಂದ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವನ್ನು ಆಚರಿಸಲಾಗುತ್ತಿದೆ. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ಚರ್ಚಿಸಿದ ರೀತಿಯಲ್ಲಿ, ಸಾರ್ವಜನಿಕರಿಗೆ ಉಪಯೋಗವಾಗುವ ಇಲಾಖೆಗಳಲ್ಲಿ ಸರ್ಕಾರಿ ಯೋಜನೆಗಳ ಕುರಿತು ಪ್ರತ್ಯೇಕ ಸ್ತಬ್ಧಚಿತ್ರ ತಯಾರಿಸಿ ನವೆಂಬರ್ 01 ರಂದು ಜರುಗುವ ಕನ್ನಡರಾಜ್ಯೋತ್ಸವ ಮೆರವಣಿಗೆಯಲ್ಲಿ ಪಾಲ್ಗೊಳ್ಳಬೇಕು. ಅಂದು ಬೆಳಿಗ್ಗೆ 7:30ಕ್ಕೆ ನಗರ ನೀಲಕಂಠೇಶ್ವರ ದೇವಸ್ಥಾನದಿಂದ ಭುವನೇಶ್ವರಿ ದೇವಿಯ ಭಾವಚಿತ್ರದೊಂದಿಗೆ ಸ್ತಬ್ಧಚಿತ್ರಗಳ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲ ಸಂಚರಿಸಲಿವೆ. ಪೊಲೀಸ್ ಇಲಾಖೆ ವತಿಯಿಂದ ಪ್ರತಿಯೊಂದು ಇಲಾಖೆ, ನಿಗಮ, ಶಾಲಾ ಕಾಲೇಜು ಹಾಗೂ ವಿದ್ಯಾಸಂಸ್ಥೆಗಳಿಗೆ ಪ್ರತ್ಯೇಕ ಸಂಖ್ಯೆ ನೀಡಿ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಾಗುವುದು. ಅಧಿಕಾರಿಗಳು ಅಂದು ಮುಂಜಾನೆ 6:30ಕ್ಕೆ ಸರಿಯಾಗಿ ತಮ್ಮ ಸ್ತಬ್ಧಚಿತ್ರದೊಂದಿಗೆ ನೀಲಕಂಠೇಶ್ವರ ದೇವಸ್ಥಾನದ ಬಳಿ ಆಗಮಿಸಬೇಕು ಎಂದರು.
ಸಭೆಯಲ್ಲಿ ಚಿತ್ರದುರ್ಗ ಅರಣ್ಯ ಇಲಾಖೆ ಉಪಸಂರಕ್ಷಣಾಧಿಕಾರಿ ರಾಜಣ್ಣ.ಟಿ, ಡಿವೈಎಸ್‍ಪಿ ತಿಪ್ಪೇಸ್ವಾಮಿ, ತಾಲ್ಲೂಕು ದೈಹಿಕ ಶಿಕ್ಷಣ ಅಧಿಕಾರಿ ನೀಲಕಂಠಾಚಾರಿ ಸೇರಿದಂತೆ ಇತರೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

 

 

[t4b-ticker]

You May Also Like

More From Author

+ There are no comments

Add yours