OBC ಪಟ್ಟಿಯಿಂದ ತಳವಾರ ಪರಿವಾರ ತೆಗೆದು ಹಾಕಿದ ಸರ್ಕಾರ

 

 

 

 

ಬೆಂಗಳೂರು:  ಒಬಿಸಿ(OBC) ಪಟ್ಟಿಯಿಂದ ತಳವಾರ ಹಾಗೂ ಪರಿವಾರ ಸಮುದಾಯಗಳನ್ನು ತೆಗೆದುಹಾಕಿದ್ದು ಈ ಕುರಿತು ರಾಜ್ಯ ಸರ್ಕಾರ ಇಂದು ಅಧಿಕೃತ ಆದೇಶ ಹೊರಡಿಸಿದೆ. ಬೆಂಗಳೂರು: ಒಬಿಸಿ ಪಟ್ಟಿಯಿಂದ ತಳವಾರ ಹಾಗೂ ಪರಿವಾರ ಸಮುದಾಯಗಳನ್ನು ತೆಗೆದುಹಾಕಿದ್ದು ಈ ಕುರಿತು ರಾಜ್ಯ ಸರ್ಕಾರ ಇಂದು ಅಧಿಕೃತ ಆದೇಶ ಹೊರಡಿಸಿದೆ.(OBC)

 

 

ಪರಿಶಿಷ್ಟ ಪಂಗಡ ಮೀಸಲಾತಿಗೆ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಒಬಿಸಿಯಿಂದ ತಳವಾರ ಮತ್ತು ಪರಿವಾರ ಸಮುದಾಯವನ್ನು ಕೈಬಿಡಲಾಗಿದೆ. 2020ರ ಮಾರ್ಚ್ 19ರಂದು ಕೇಂದ್ರ ಸರ್ಕಾರ ತಳವಾರ ಮತ್ತು ಪರಿವಾರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ರಾಜ್ಯಪತ್ರ ಹೊರಡಿಸಿತ್ತು. ಆದರೆ ಇದರಿಂದ ಕೆಲ ಗೊಂದಲಗಳು ಸೃಷ್ಟಿಯಾಗಿತ್ತು. ಕೇಂದ್ರ ಸರ್ಕಾರ ತನ್ನ ಗೆಜೆಟಿಯರ್ ನಲ್ಲಿ ನಾಯಕ, ನಾಯಕ್ ಪರ್ಯಾಯ ಪದಗಳಾದ ಪರಿವಾರ ಹಾಗೂ ತಳವಾರ ಜಾತಿಗಳನ್ನು ಒಳಗೊಂಡಂತೆ ಪರಿಶಿಷ್ಠ ಪಂಗಡಕ್ಕೆ ಸೇರಿದವರಿಗೆ ಪರಿಶಿಷ್ಟ ವರ್ಗದ ಜಾತಿ ಪ್ರಮಾಣಪತ್ರ ನೀಡಬಹುದು ಎಂದು ಹೇಳಿತ್ತು. ಇನ್ನು ರಾಜ್ಯ ಸರ್ಕಾರ ಕಳೆದ ಜೂನ್ನಲ್ಲಿ ಹೊರಡಿಸಿದ ಸುತ್ತೋಲೆ ಹಾಗೂ ಆಗಸ್ಟ್ನಲ್ಲಿ ಹೊರಡಿಸಿದ ಅಧಿಸೂಚನೆಯಲ್ಲಿ ಪರಿಶಿಷ್ಟ ಪಂಗಡದ ಪರಿವಾರ ಹಾಗೂ ತಳವಾರ ಜಾತಿಗಳಿಗೆ ಜಾತಿ ಪ್ರಮಾಣ ಪತ್ರ ನೀಡಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸೂಚನೆ ನೀಡಿತ್ತು. ಆದರೂ ಈ ವರ್ಗಗಳಿಗೆ ಸೇರಿದ ವ್ಯಕ್ತಿಗಳು ಜಾತಿ ಪ್ರಮಾಣ ಪತ್ರ ಪಡೆಯಲು ತೊಂದರೆ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅಧಿಕೃತವಾಗಿ ಪಟ್ಟಿಯಿಂದ ತೆಗೆದುಹಾಕಿರುವುದರಿಂದ ಗೊಂದಲ ಪರಿಹಾರವಾಗಲಿದೆ.

[t4b-ticker]

You May Also Like

More From Author

+ There are no comments

Add yours