ನ.8 ಮತ್ತು 9ರಂದು ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ

 

 

 

 

ಚಿತ್ರದುರ್ಗ(ಕರ್ನಾಟಕ ವಾರ್ತೆ)ನ.07:
ಕೃಷಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ಪಾಟೀಲ್ ಅವರು ಇದೇ ನವೆಂಬರ್ 8 ಮತ್ತು 9ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸಚಿವರು ನವೆಂಬರ್ 8ರಂದು ಸಂಜೆ 4ಕ್ಕೆ ಬ್ಯಾಡಗಿಯಿಂದ ರಸ್ತೆ ಮೂಲಕ ಸಾಣೇಹಳ್ಳಿಗೆ ಆಗಮಿಸುವರು. ಶ್ರೀ ಶಿವಕುಮಾರ ಕಲಾ ಸಂಘ ಸಾಣೇಹಳ್ಳಿ ವತಿಯಿಂದ ಆಯೋಜಿಸಿರುವ ನಾಟಕೋತ್ಸವ ಸಮಾರೋಪ ಸಮಾರಂಭದಲ್ಲಿ ಭಾಗವಹಿಸುವರು. ನಂತರ ಸಾಣೇಹಳ್ಳಿಯಿಂದ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡುವರು.
ನವೆಂಬರ್ 9ರಂದು ಬೆಳಿಗ್ಗೆ 8ಕ್ಕೆ ವಾಣಿವಿಲಾಸ ಅತಿಥಿ ಗೃಹದಿಂದ ಹೊರಟು, ಬೆಳಿಗ್ಗೆ 9ಕ್ಕೆ ಚಿತ್ರದುರ್ಗಕ್ಕೆ ಆಗಮಿಸಿ, ಪಕ್ಷದ ಜಿಲ್ಲಾ ಕಚೇರಿಗೆ ಭೇಟಿ ನೀಡುವರು. ನಂತರ ಮಧ್ಯಾಹ್ನ 12ಕ್ಕೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಜಿಲ್ಲಾ ಉಸ್ತುವಾರಿ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಕೆ.ಆರ್.ಶಿವಕುಮಾರ್ ತಿಳಿಸಿದ್ದಾರೆ.

 

 

[t4b-ticker]

You May Also Like

More From Author

+ There are no comments

Add yours