ನ.14 ಮತ್ತು 15ರಂದು ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

 

 

 

 

ಚಿತ್ರದುರ್ಗ(ಕರ್ನಾಟಕ ವಾರ್ತೆ)ನ.10:
ದಾವಣಗೆರೆ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಇದೇ ನವೆಂಬರ್ 14 ಹಾಗೂ 15 ರಂದು ದಾವಣಗೆರೆ ನಗರದ ಪಿ.ಬಿ.ರಸ್ತೆಯ ಅರುಣ ಚಿತ್ರ ಮಂದಿರದ ಎದುರಿನ ಪಶು ಆಸ್ಪತ್ರೆ ಆವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ರೈತರಿಗೆ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಹಮ್ಮಿಕೊಳ್ಳಲಾಗಿದೆ.
ಆಸಕ್ತರು ಆಧಾರ್ ಕಾರ್ಡ್, ಎರಡು  ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಗಳೊಂದಿಗೆ ತರಬೇತಿಗೆ ಹಾಜರಾಗಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08192-233787 ಗೆ ಸಂಪರ್ಕಿಸಬಹುದು ಎಂದು ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯ ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

 

 

[t4b-ticker]

You May Also Like

More From Author

+ There are no comments

Add yours